ಬಳಸಿದ ವಾಹನಗಳನ್ನು ಕೊಳ್ಳುವುದಕ್ಕೂ ಮುನ್ನ ಎಚ್ಚರ

ಬಳಸಿದ ವಾಹನಗಳನ್ನು ಕೊಳ್ಳುವುದಕ್ಕೂ ಮುನ್ನ ಗ್ರಾಹಕರು ಆನ್ ಲೈನ್ ನಲ್ಲಿ ಆ ವಾಹನಗಳ ಕುರಿತಂತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬಳಸಿದ ವಾಹನಗಳನ್ನು ಕೊಳ್ಳುವುದಕ್ಕೂ ಮುನ್ನ ಗ್ರಾಹಕರು ಆನ್ ಲೈನ್ ನಲ್ಲಿ ಆ ವಾಹನಗಳ ಕುರಿತಂತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ಹೆಚ್ಚಾಗುತ್ತಿದೆ. ಬಳಸಿದ ವಾಹನಗಳು ಕಡಿಮೆ ಬೆಲೆಗೆ ಸಿಗುತ್ತಿದ್ದಂತೆ ಗ್ರಾಹಕರು ಆ ವಾಹನ ಹಿನ್ನೆಲೆ ಹಾಗೂ ಆ ವಾಹನದ ಮೇಲೆ ಪ್ರಕರಣಗಳೇನಾದರೂ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸದೆಯೇ ಕೊಂಡುಕೊಳ್ಳುತ್ತಿದ್ದಾರೆ.

ಇದರಿಂದ ನಿಜವಾದ ಕಳ್ಳರು ತಪ್ಪಿಸಿಕೊಳ್ಳುತ್ತಿದ್ದು, ತಪ್ಪು ಮಾಡದವರು ಸಿಕ್ಕಿಹಾಕಿಕೊಳ್ಳುತ್ತಿರುವ ಪ್ರಸಂಗಗಳು ಹೆಚ್ಚಾಗುತ್ತಿವೆ. ಎಂ.ಎಸ್. ರಘುನಾಥ್ ಎಂಬ ವ್ಯಕ್ತಿ 39ಕ್ಕೂ ಹೆಚ್ಚು ಸಂಚಾರಿ ನಿಯಮ ಉಲ್ಲಂಘಿಸಿದ್ದು, ಇದೀಗ ವ್ಯಕ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಬಳಸಿದ ವಾಹನ ಕೊಳ್ಳುವುದಕ್ಕೂ ಮುನ್ನ ವಾಹನ ಸಂಖ್ಯೆಯನ್ನು ಆನ್ ಲೈನ್ ನಲ್ಲಿ ಹಾಕಿ ಅದರ ಪೂರ್ವಾಪರ ತಿಳಿದುಕೊಳ್ಳುವಂತೆ ತಿಳಿಸಿದ್ದಾರೆ.

ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವವರ ಮೇಲೆ 179 ಕ್ಯಾಮೆರಾಗಳು ಕಣ್ಗಾವಲಿಸಿದೆ. ಇದರಿಂದ ಸಂಚಾರಿ ನಿಯಮ ಉಲ್ಲಂಘಿಸುವ ಕಳ್ಳರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ವಾಹನ ಸವಾರರನ್ನು ಹಿಡಿಯಲು ಪೊಲೀಸರಿಗೆ ಬ್ಲೂಟೂತ್ ಪ್ರಿಂಟರ್ಸ್ ಜೊತೆಗೆ 350 ಬ್ಲ್ಯಾಕ್ ಬೆರಿ ಮೊಬೈಲ್ ಫೋನ್ ಗಳನ್ನು ನೀಡಲಾಗಿದೆ. ವಾಹನ ಸವಾರರು ಪ್ರತೀನಿತ್ಯ ನಮ್ಮ ವೆಬ್ ಸೈಟ್ ಗೆ ಭೇಟಿ ನೀಡಿದ ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ದೇ ಆದರೆ, ದಂಡವನ್ನು ಕಟ್ಟಬೇಕು ಎಂದು ಹಿರಿಯ ಸಂಚಾರಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com