ರೈಲು ಸೇವೆಗೆ ಅಡ್ಡಿಪಡಿಸಿದ ರೈತರಿಂದ ಟಿಕೆಟ್ ರಹಿತ ಪ್ರಯಾಣಕ್ಕೆ ಆಗ್ರಹ

ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಶನಿವಾರ ರೈತರು ನಡೆಸಿದ ಪ್ರತಿಭಟನೆ ಕೆಲವು ಗಂಟೆಗಳ ಕಾಲ ರೈಲು ಸಂಚಾರ ಅಸ್ತವ್ಯಸ್ತಗೊಳ್ಳುವಂತೆ ಮಾಡಿತ್ತು...
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು.

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಶನಿವಾರ ರೈತರು ನಡೆಸಿದ ಪ್ರತಿಭಟನೆ ಕೆಲವು ಗಂಟೆಗಳ ಕಾಲ ರೈಲು ಸಂಚಾರ ಅಸ್ತವ್ಯಸ್ತಗೊಳ್ಳುವಂತೆ ಮಾಡಿತ್ತು.

ನಿನ್ನೆ ಸಂಜೆ ಮೈಸೂರಿಗೆ ಹೊರಡುತ್ತಿದ್ದ ಚಾಮುಂಡಿ ಎಕ್ಸ್ ಪ್ರೆಸ್ ರೈಲಿನ ಫ್ಲಾಟ್ ಫಾರ್ಮ್ 5ರ ಬಳಿ ಬಂದಿರುವ ರೈತರ ಗುಂಪೊಂದು ಟಿಕೆಟ್ ರಹಿತ ಪ್ರಯಾಣಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿದೆ. ಇದಕ್ಕೆ ರೈಲ್ವೆ ಇಲಾಖೆ ಅನುಮತಿ ನೀಡದ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿ ರೈಲು ಹೋಗದಂತೆ ತಡೆಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ರೈಲು ಹೊರಡಲು ತಡವಾದ್ದರಿಂದ ಪ್ರಯಾಣಿಕರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಕೆಲವು ಗಂಟೆಗಳ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕೆಲ ರೈತರ ಗುಂಪು ರೈಲಿನ ಬಳಿ ಬಂದು ಟಿಕೆಟ್ ರಹಿತ ಪ್ರಯಾಣಕ್ಕೆ ಅನುಮತಿ ನೀಡುವಂತೆ ಕೇಳಿದವು. ಇದಕ್ಕೆ ಇಲಾಖೆ ಅನುಮತಿ ನೀಡದ ಹಿನ್ನೆಲೆಯಲ್ಲಿ ರೈಲ್ವೇ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ನಾಯಕ ಹಾಗೂ ಮೇಲುಕೋಟೆ ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಅವರು ಬಂದು 150 ಟಿಕೆಟ್ ಗಳನ್ನು ಕೊಂಡುಕೊಂಡು ರೈಲ್ವೇ ಅಧಿಕಾರಿಗಳಿಗೆ ತೋರಿಸಿದ್ದರು. ನಂತರ ಸಂಜೆ 7.25ರ ಸುಮಾರಿಗೆ ರೈಲು ಹೊರಟಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದರಂತೆ ಮದ್ದೂರಿನಲ್ಲಿ ನಿನ್ನೆ ಸಂಜೆ 5.20ರ ಸುಮಾರಿಗೆ ಇದೇ ರೀತಿಯ ಘಟನೆ ನಡೆದಿದ್ದು, ಮದ್ದೂರಿನಲ್ಲಿದ್ದ ರೈಲನ್ನು ತಡೆಹಿಡಿದಿದ್ದ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿತ್ತು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com