ರಾಜ್ಯ ಕರಾವಳಿ ತೀರ ಪ್ರದೇಶದಲ್ಲಿ ಮಳೆಯ ಅಭಾವ

ಈ ಬಾರಿ ಮುಂಗಾರು ಆರಂಭವಾಗಿದ್ದೇ ವಿಳಂಬವಾಗಿ. ಇಷ್ಟಾದರೂ ರಾಜ್ಯದ ಕರಾವಳಿ ತೀರ ಪ್ರದೇಶದಲ್ಲಿ ಮಳೆಯ ಅಬ್ಬರ ಅಷ್ಟಕಷ್ಟೇ ಎಂಬಂತಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಈ ಬಾರಿ ಮುಂಗಾರು ಆರಂಭವಾಗಿದ್ದೇ ವಿಳಂಬವಾಗಿ. ಇಷ್ಟಾದರೂ ರಾಜ್ಯದ ಕರಾವಳಿ ತೀರ ಪ್ರದೇಶದಲ್ಲಿ ಮಳೆಯ ಅಬ್ಬರ ಅಷ್ಟಕಷ್ಟೇ ಎಂಬಂತಿದೆ.

ಕರ್ನಾಟಕದ ಕರಾವಳಿ ತೀರ ಪ್ರದೇಶ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸರಿಯಾದ ರೀತಿಯಲ್ಲಿ ಮಳೆಯಾಗುತ್ತಿಲ್ಲ. ಆದರೂ, ಇಲ್ಲಿನ ರೈತ ಹಾಗೂ ಕೃಷಿ ಇಲಾಖೆ ಮಾತ್ರ ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿರಲಿದೆ ಎಂದು ಹೇಳುತ್ತಿದೆ.

ಜಿಲ್ಲಾ ಅಂಕಿ ಅಂಶಗಳ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 42.4 ಮಿಮೀ ನಷ್ಟು ಸಾಮಾನ್ಯ ಮಟ್ಟದಲ್ಲಿ ಮಳೆಯಾಗಿದೆ. ಕಳೆದ ಬಾರಿ ಇದೇ ಸಮಯದಲ್ಲಿ 39.1ರಷ್ಟು ಮಳೆಯಾಗಿತ್ತು.

2015ನೇ ಸಾಲಿನ ವರ್ಷದಲ್ಲಿ ಶೇ.22ರಷ್ಟು ಮಳೆಯ ಕೊರತೆಯುಂಟಾಗಿತ್ತು. ಆದರೆ, ಈ ಬಾರಿ ಮುಂಗಾರು ಕೊಂಚ ತಡವಾಗಿ ಬಂದಿದ್ದರೂ, ಇನ್ನು ಕೆಲವೇ ದಿನಗಳಲ್ಲಿ ಜಿಲ್ಲೆಗಳು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com