ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಕಾರು ಅಪಘಾತ: 4 ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಸಕಲೇಶಪುರ ತಾಲೂಕಿನ ಕುಂಬಾರಹಟ್ಟಿ ಬಳಿ ಸಂಭವಿಸಿದೆ...
ಅಪಘಾತ
ಅಪಘಾತ
Updated on

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಸಕಲೇಶಪುರ ತಾಲೂಕಿನ ಕುಂಬಾರಹಟ್ಟಿ ಬಳಿ ಸಂಭವಿಸಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿಗಳಾದ ನಿಶಾಂತ್, ಕೃಷ್ಣಕುಮಾರ್, ಧನಂಜಯ್ ಹಾಗೂ ಕಿಶನ್ ಧರ್ಮಸ್ಥಳದಿಂದ ಬೆಂಗಳೂರಿಗೆ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದು ಈ ವೇಳೆ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಎಲ್ಲರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಕಲೇಶಪುರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com