

ಉಡುಪಿ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಗೆಯಾಗಿದ್ದು, ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಜತೆಗೆ ಗಾಳಿಯ ಅಬ್ಬರವೂ ಜೋರಾಗಿದ್ದು, ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಉಳ್ಳಾಲ, ಕೋಟ ಪಡುಕರೆ ಮತ್ತು ಕಿರಿ ಮಂಜೇಶ್ವರದಲ್ಲಿ ಕಡಲ್ಕೊರೆತದ ಭೀತಿ ಎದುರಾಗಿದೆ. ಸುಬ್ರಹ್ಮಣ್ಯ ಸ್ನಾನ ಘಟ್ಟ ಇದೀಗ ಸಂಪೂರ್ಣ ಜಲಾವೃತ್ತಗೊಂಡಿದೆ. ಭಾರಿ ಮಳೆಯಿಂದಾಗಿ ಹಲವು ಮನೆಗಳು ನಾಶಗೊಂಡಿದೆ.
ಉಡುಪಿ ಜಿಲ್ಲೆಯ ಇಚ್ಚಿಲದಲ್ಲಿ ಕಡಲ ಅಬ್ಬರ ಹೆಚ್ಚಾಗಿದ್ದು, ಸಮುದ್ರ ತೀರದ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ. ಕರಾವಳಿಯ ಸಮುದ್ರದಲ್ಲಿ ತೀವ್ರ ಬಿರಿಗಾಳಿ ಬೀಸುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮೀನುಗಾರರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಿದೆ.