
ಬೆಂಗಳೂರು: ಹಲವು ದಿನಗಳಿಂದ ತೀವ್ರ ಚರ್ಚೆಗೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆ ಪಡೆದ ದುಬಾರಿ ವಾಚ್ ಪ್ರಕರಣ ಈಗ ಹೈಕೋರ್ಟ್ ಮೆಟ್ಟಿಲೇರಿದೆ.
ದುಬಾರಿ ವಾಚ್ ಉಡುಗೊರೆ ಪಡೆದ ಮುಖ್ಯಮಂತ್ರಿಗಳ ವಿರುದ್ಧ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ನಟರಾಜ್ ಎಸ್.ಶರ್ಮಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಇತ್ಯರ್ಥವಾಗುವರೆಗೂ ಉಡುಗೊರೆ ಪಡೆದ ದುಬಾರಿ ವಾಚ್ ಅನ್ನು ಸಾರ್ವಜನಿಕವಾಗಿ ಹರಾಜು ಹಾಕದೆ, ಅದನ್ನು ಕೂಡಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ವಶಕ್ಕೆ ನೀಡುವಂತೆ ಮುಖ್ಯಮಂತ್ರಿಗಳಿಗೆ ನಿರ್ದೇಶಿಸಬೇಕು. ಈ ದುಬಾರಿ ವಾಚನ್ನು ಸುರಕ್ಷಿತವಾಗಿಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.
Advertisement