ಕನ್ನಡ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷರಾಗಿ ಮನುಬಳಿಗಾರ್ ಅಧಿಕಾರ ಸ್ವೀಕಾರ

ಕನ್ನಡ ಸಾಹಿತ್ಯ ಪರಿಷತ್‌ನ 25ನೇ ರಾಜ್ಯಾಧ್ಯಕ್ಷರಾಗಿ ಮನುಬಳಿಗಾರ್ ಗುರುವಾರ ಅಧಿಕಾರ...
ಮನು ಬಳಿಗಾರ್
ಮನು ಬಳಿಗಾರ್
Updated on
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನ 25ನೇ ರಾಜ್ಯಾಧ್ಯಕ್ಷರಾಗಿ ಮನುಬಳಿಗಾರ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್‌ನ ಆಡಳಿತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ. ದಯಾನಂದ್ ಅವರಿಂದ ಅಧಿಕಾರ ಸ್ವೀಕರಿಸಿದರು.
ನಂತರ ಮಾತನಾಡಿದ ಮನುಬಳಿಗಾರ್, ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚು ಮಾಡುವುದು ಹಾಗೂ ಶಾಲೆಗಳಿಗೆ ಬೇಕಾದ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ. 
ಕನ್ನಡ ಸಾಹಿತ್ಯ ಪರಿಷತ್‌ನ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶತಮಾನೋತ್ಸವ ಭವನವನ್ನು ತಮ್ಮ ಅವಧಿಯಲ್ಲೇ ಪೂರ್ಣಗೊಳಿಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸೌಲಭ್ಯವನ್ನು ಸಂಪೂರ್ಣವಾಗಿ ಪಡೆಯಲು ಗಮನಹರಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com