8 ಅಥಿತಿ ಉಪನ್ಯಾಸಕರಿಂದ ಪ್ರಧಾನಿಗೆ ಪತ್ರ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದೂರು

ರಾಜ್ಯ ಸರ್ಕಾರದ ಪದವಿ ಕಾಲೇಜುಗಳಲ್ಲಿ ಅಥಿತಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ 8 ಶಿಕ್ಷಕರು ಪ್ರಧಾನಿ ನರೆಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಪದವಿ ಕಾಲೇಜುಗಳಲ್ಲಿ ಅಥಿತಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ 8 ಶಿಕ್ಷಕರು ಪ್ರಧಾನಿ ನರೆಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮದ್ಯಪ್ರವೇಶಿಸಬೇಕೆಂಬ ಬೇಡಿಕೆ ಇಟ್ಟಿದ್ದಾರೆ.

ಉತ್ತರ ಕರ್ನಾಟಕದ ಕಾಲೇಜಿನ 8 ಅಥಿತಿ ಉಪನ್ಯಾಸಕರು ತಮ್ಮ ಸಮಸ್ಯೆ ಬಗೆಹರಿಯದೆ ಇದ್ದರೆ ಮಾ.12 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿರುವ ಮಿನಿ ವಿಧಾನಸೌಧದ ಎದುರು ಅತ್ಮಹೆತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಟಿಬಿ ಜಯಚಂದ್ರ ಹೊಣೆಯಾಗಲಿದ್ದಾರೆ ಎಂದು ಪ್ರಧಾನಿ ಮೋದಿಗೆ ಬರೆದಿರುವ ಪತ್ರದಲ್ಲಿ ಎಚ್ಚರಿಸಿದ್ದಾರೆ. ಹಲವು ವರ್ಷಗಳಿಂದ ತಾವು ಅಥಿತಿ ಉಪನ್ಯಾಸಕರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ತಮಗೆ ಕಡಿಮೆ ವೇತನ ನೀಡಲಾಗುತ್ತಿದೆ, ಅದೂ ಸರಿಯಾದ ಸಮಯಕ್ಕೆ ನೀಡಲಾಗುತ್ತಿಲ್ಲ, ಅಲ್ಲದೆ ರಾಜ್ಯ ಸರ್ಕಾರ ಉದ್ಯೋಗ ಭದ್ರತೆಯನ್ನು ನೀಡಿಲ್ಲ.

ಉದ್ಯೋಗವನ್ನು ಖಾಯಂಗೊಳಿಸಲು ಒತ್ತಾಯಿಸುತ್ತಿದ್ದೇವಾದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇಲಾಖೆಯಲ್ಲಿ ನಮ್ಮನ್ನು ಮೃಗಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಅಥಿತಿ ಉಪನ್ಯಾಸಕರು ಪ್ರಧಾನಿ ಬಳಿ ಅಳಲು ತೋಡಿಕೊಂಡಿದ್ದಾರೆ. ಸರ್ಕಾರ ನೀಡುತ್ತಿರುವ ವೇತನದಲ್ಲಿ ಬದುಕಲು ಸಾಧ್ಯವಾಗುತ್ತಿಲ್ಲ, ಮಾ.12 ರೊಳಗೆ ಸಮಸ್ಯೆ ಬಗೆಹರಿಯದೆ ಇದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ, ಇದಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉನ್ನತಶಿಕ್ಷಣ ಸಚಿವ ಟಿಬಿ ಜಯಚಂದ್ರ ಹೊಣೆಯಾಗಲಿದ್ದಾರೆ ಎಂದು ಅಥಿತಿ ಉಪನ್ಯಾಸಕರು ಎಚ್ಚರಿಸಿದ್ದಾರೆ. ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಮದ್ಯಪ್ರವೇಶ ಮಾಡಬೇಕೆಂದು ಪತ್ರದಲ್ಲಿ ಮೋದಿಗೆ ಮನವಿ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com