

ಬೆಂಗಳೂರು: ಪ್ಲಾಸ್ಟಿಕ್ ಉತ್ಪನ್ನಗಳನ್ನು ರಾಜ್ಯಾದ್ಯಂತ ನಿಷೇಧಿಸುವ ಅಂತಿಮ ಅಧಿಸೂಚನೆ ಹೊರಡಿಸಲು ಸರ್ಕಾರ ತೀರ್ಮಾನಿಸಿದೆ.
ಇದೇ ವೇಳೆ ಡಸ್ಟ್‌ಬಿನ್, ಪ್ಲಾಸ್ಟಿಕ್ ಬಕೆಟ್, ಮಗ್ ರಫ್ತು ಉದ್ದೇಶಕ್ಕೆ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕೆ, ಆರೋಗ್ಯ ಕ್ಷೇತ್ರ ಮುಂತಾದ ವಿಭಾಗಗಳಲ್ಲಿ ಉಪಯೋಗಿಸುವ ಪ್ಲಾಸ್ಟಿಕ್ ಕೈಚೀಲ ಮತ್ತು ಪ್ಲಾಸ್ಟಿಕ್ ಉತ್ಪನ್ನಗಳಿಗೆ ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ಯಾವುದೇ ಮೈಕ್ರಾನ್‌ನ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳು, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಣೆ, ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು ಮಾತ್ರವಲ್ಲದೆ ಥರ್ಮಾಕೋಲ್ ಮತ್ತು ಮೈಕ್ರೋ ಬೀಡ್ಸ್ ಬಳಸಿ ತಯಾರಿಸಿದ ಉತ್ಪನನಗಳ ನಿಷೇಧ ಕುರಿತು ಸಂಬಂಧಿಸಿದ ಕಾಯ್ದೆಗೆ ತಿದ್ದುಪಡಿ ತಂದು ಅಂತಿಮ ಅಧಿಸೂಚನೆ ಹೊರಡಿಸಬೇಕು. ಅದರಂತೆ ಮುಂದಿನ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ತೀರ್ಮಾನಿಸಲಾಗಿದೆ.