

ಕೋಲಾರ: ಹೋಂಡಾ ಸಿಟಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಹೊತ್ತಿಕೊಂಡು ಕೋಲಾರ- ಮಡಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅದಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜಯನಗರದ ಚೇತನ್ ತಿರುಪತಿಗೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಆಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರು ಚಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.