ನಿಂತಿದ್ದ ಟಿಪ್ಪರ್ ಗೆ ಲಾರಿ ಡಿಕ್ಕಿ: ನಾಲ್ವರ ದುರ್ಮರಣ

ನಿಲ್ಲಿಸಿದ್ದ ಟಿಪ್ಪರ್‌ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತ ಪಟ್ಟಿರುವ ಘಟನೆ ಮಂಗಳೂರಿನ ಬಜ್ಪೆ ಸಮೀಪದ ಎಡಪದವಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮಂಗಳೂರು:ನಿಲ್ಲಿಸಿದ್ದ ಟಿಪ್ಪರ್‌ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತ ಪಟ್ಟಿರುವ ಘಟನೆ ಮಂಗಳೂರಿನ ಬಜ್ಪೆ ಸಮೀಪದ ಎಡಪದವಿನಲ್ಲಿ ನಡೆದಿದೆ.

ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೆ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಇನ್ನು ಹಲವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಹೆಸರು, ವಿಳಾಸ ಗುರುತು ಪತ್ತೆಯಾಗಿಲ್ಲ.  ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com