ಮೆಗಾ ಯೋಜನೆಗಳಿಗೆ ಎಡಿಬಿ ನೆರವು ಪಡೆಯಲಿರುವ ಕರ್ನಾಟಕ

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ, ಬೆಂಗಳೂರು ನಗರದ ಮೂಲಸೌಕರ್ಯ ಯೋಜನೆಗಳ ಜೊತೆಗೆ ಎಲಿವೇಟೆಡ್ ಕಾರಿಡಾರ್ ಹಾಗೂ ರಾಜ್ಯದಲ್ಲಿ ರಸ್ತೆಗಳ ನಿರ್ಮಾಣ ಯೋಜನೆಗಳಲ್ಲಿ ಹೂಡಿಕೆ ಮಾಡಲು ಏಷ್ಯಾ ಅಭಿವೃದ್ಧಿ ಬ್ಯಾಂಕ್...
ಏಷ್ಯಾ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಟೆಕೆಹಿಕೊ ನಕಾವೋ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಏಷ್ಯಾ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಟೆಕೆಹಿಕೊ ನಕಾವೋ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ, ಬೆಂಗಳೂರು ನಗರದ ಮೂಲಸೌಕರ್ಯ ಯೋಜನೆಗಳ ಜೊತೆಗೆ ಎಲಿವೇಟೆಡ್ ಕಾರಿಡಾರ್ ಹಾಗೂ ರಾಜ್ಯದಲ್ಲಿ ರಸ್ತೆಗಳ ನಿರ್ಮಾಣ ಯೋಜನೆಗಳಲ್ಲಿ ಹೂಡಿಕೆ ಮಾಡಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ ಆಸಕ್ತಿ ತೋರಿದೆ. ಆದರೆ ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಎಡಿಬಿ ಹೂಡಿಕೆಯಡಿ ನಡೆಯುತ್ತಿರುವ ಯೋಜನೆಗಳು ಕುಂಟುತ್ತಾ ಸಾಗಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿವೆ.

ಎಡಿಬಿ ಅಧ್ಯಕ್ಷ ಟೆಕೆಹಿಕೊ ನಕಾವೋ ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಹಾಗೂ ವಿವಿಧ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿದ್ದು, ರಾಜ್ಯದ ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿತು.

ಕೆಲವೊಂದು ಕಾಮಗಾರಿಗಳಲ್ಲಿ ಗುತ್ತಿಗೆದಾರರ ವಿಳಂಬದಿಂದಾಗಿ ನಿರೀಕ್ಷಿತ ವೇಗ ಪಡೆದುಕೊಳ್ಳದ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರೆಂದು ಟೆಕೆಹಿಕೊ ಮಾತುಕತೆ ಬಳಿಕ ತಿಳಿಸಿದರು.

ಹವಾಮಾನ ಬದಲಾವಣೆ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಯೋಜನೆಗಳಲ್ಲಿ ಹೂಡಿಕೆ ಮಾಡಲು ಸಿದ್ದವಿರುವುದಾಗಿ ಎಡಿಬಿ ಅಧ್ಯಕ್ಷರ ನಿಯೋಗ ಭರವಸೆ ನೀಡಿತೆಂದು ಮಾತುಕತೆ ಬಳಿಕ ಮುಖ್ಯ ಕಾರ್ಯದರ್ಶಿ ಜಾಧವ್ ತಿಳಿಸಿದರು. ಬೆಂಗಳೂರಿನ ಉದ್ದೇಶಿತ ಎಲವೇಟೆಡ್ ಕಾರಿಡಾರ್ ಜೊತೆಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ಯೋಜನೆಗಳಲ್ಲೊಂದಾಗಿರುವ ಬಯಲುಸೀಮೆಯ ಬರಪೀಡಿತ ಜಿಲ್ಲೆಗಳಿಗೆ ನೀರೊದಗಿಸುವ ಎತ್ತಿನಹೊಳೆ ಯೋಜನೆಯಲ್ಲಿಯೂ ಮಾತುಕತೆ ವೇಳೆ ಎಡಿಬಿ ಆಸಕ್ತಿ ವಹಿಸಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಈಗಾಗಲೇ ಕಾಮಗಾರಿಗಳಲ್ಲಾಗಿರುವ ಪ್ರಗತಿ ಪರಿಶೀಲನೆ ಜೊತೆಗೆ ಯೋಜನೆಗಳ ಕುರಿತು ಪರಸ್ಪರ ಅರಿಯಲು ಸಹಕಾರಿಯಾಗುತ್ತದೆ. ದೇಶದ ಏಳನೆ ಅತಿದೊಡ್ಡ ರಾಜ್ಯವಾಗಿರುವ ಕರ್ನಾಟಕ ದೇಶ ವಿದೇಶಗಳ ಅನೇಕ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ತಂತ್ರಜ್ಞಾನ ಮತ್ತು ಅತ್ಯುತ್ತಮ ಸಂಖ್ಯೆಯ ಕುಶಲಕರ್ಮಿಗಳನ್ನು ಹೊಂದಿರುವ ರಾಜ್ಯದಲ್ಲಿ ತಂತ್ರಜ್ಞಾನ ಮತ್ತಿತರ ವಿಭಾಗಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು ರಾಜ್ಯ ಐಟಿ ಮತ್ತು ಇನ್ನಿತರ ವಲಯಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com