ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ: ಕುಟುಂಬಕ್ಕೆ ರು.5 ಲಕ್ಷ ಪರಿಹಾರಕ್ಕೆ ಡಿಸಿ ಶಿಫಾರಸು

ದುಷ್ಕರ್ಮಿಗಳಿಂದ ಭಾನುವಾರ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ರಾಜು ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ...
ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು
ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು
ಮೈಸೂರು: ದುಷ್ಕರ್ಮಿಗಳಿಂದ ಭಾನುವಾರ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ರಾಜು ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಶಿಫರಾಸು ಮಾಡಿದ್ದಾರೆ.
ರಾಜು ಕೊಲೆ ಖಂಡಿಸಿ ಬಿಜೆಪಿ ಇಂದು ಮೈಸೂರು ಬಂದ್ ಗೆ ಕರೆ ನೀಡಿದ್ದು, ಪ್ರತಿಭಟನೆ ಹಿಂಸಾಚರಾಕ್ಕೆ ತಿರುಗಿದ ಪರಿಣಾಮ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜು ಕೊಲೆಯನ್ನು ಖಂಡಿಸಿರುವ ಬಿಜೆಪಿ ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಖಾ ಅವರು ಮೃತ ರಾಜು ಕುಟುಂಬಕ್ಕೆ 5 ಲಕ್ಷ ರುಪಾಯಿ ಪರಿಹಾರ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಇನ್ನು ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿರುವ ಬಿಜೆಪಿ ಮೈಸೂರು ಘಟಕ ಸಹ, ರಾಜು ಕುಟುಂಬಕ್ಕೆ 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ. ಅಲ್ಲದೆ ಹೋಟೆಲ್ ಮಾಲೀಕರ ಸಂಘದ ರಾಜೇಂದ್ರ ಅವರು ಸಹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಹತ್ಯೆಯನ್ನು ಬಿಜೆಪಿ ಖಂಡಿಸಿತ್ತು. ಅಲ್ಲದೆ ಬಂದ್ ಗೆ ಕರೆ ನೀಡಿತ್ತು. ಇದೀಗ ಮೈಸೂರಿನಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಗಳ ಮೇಲೆ ಕಲ್ಲೂ ತೂರಾಟ ನಡೆದಿದೆ. ಇದರ ಪರಿಣಾಮ 3 ಬಸ್ ಗಳು ಜಖಂ ಗೊಂಡಿವೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com