

ಚಿತ್ತೂರು: ತಿರುಪತಿಗೆ ತೆರಳುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟೆಂಪೊ ಟ್ರಾವಲೆರ್ ನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದಾಗ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿಯ ಅಗರಾಲು ಬಳಿ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಸುರೇಶ್, ಕಿರಣ್, ಗೌರಮ್ಮ, ಪಾರ್ವತಮ್ಮ ಹಾಗೂ ರಮ್ಯಾ ಎಂದು ಗುರುತಿಸಲಾಗಿದೆ.
ಅಗರಾಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.