ಆರ್ ಟಿಇ ಅಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರಡಿ ಉಚಿತ ಸೀಟು ನೀಡಿಕೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರಡಿ ಉಚಿತ ಸೀಟು ನೀಡಿಕೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ ಮುಂದೂಡಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು  ಮಾರ್ಚ್‌ 22ರವರೆಗೆ ಅರ್ಜಿ ಸಲ್ಲಿಸಬಹುದು.

ಆರ್‌ಟಿಇ ಅರ್ಜಿ ಸಲ್ಲಿಕೆಗೆ ಈ ಮೊದಲು ಮಾರ್ಚ್‌ 15 ಕೊನೆಯ ದಿನವಾಗಿತ್ತು. ಈ ವರ್ಷ ಬಹುತೇಕ ಕಡೆ ನಿರೀಕ್ಷಿತ ಪ್ರಮಾಣದಲ್ಲಿ ಅರ್ಜಿಗಳು ಬಂದಿಲ್ಲ. ಜತೆಗೆ ಮಕ್ಕಳ ಪೋಷಕರು ಹಾಗೂ ಆರ್‌ಟಿಇ ಪಡೆಯವರು ಆರ್‌ಟಿಇ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ ಮಾಡುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಗಡುವನ್ನು ಮಾರ್ಚ್‌ 22 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕ ಕೆ. ಆನಂದ್‌ ಹೇಳಿದ್ದಾರೆ.

ಸಮಾಜದ ಬಡ ಮತ್ತು ನಿರ್ಗತಿಕ ಪೋಷಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ 8ನೇ ತರಗತಿಯವರೆಗೆ ಉಚಿತವಾಗಿ ಶಿಕ್ಷಣ ಪಡೆಯುವ ಕೇಂದ್ರ ಸರ್ಕಾರದ ಯೋಜನೆ ಇದಾಗಿದೆ. ಕೆಲವು ಶಾಲೆಗಳಲ್ಲಿ ಎಲ್ ಕೆಜಿಗೆ ಪ್ರವೇಶವಿದ್ದರೆ ಇನ್ನು ಕೆಲವು ಶಾಲೆಗಳಲ್ಲಿ 1ನೇ ತರಗತಿಗೆ ಆರ್ ಟಿಇಯಡಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com