ಪೋಲಿಯೋ ಲಸಿಕೆ ಜೊತೆ ಚುಚ್ಚುಮದ್ದು

ವಿಶ್ವ ಆರೋಗ್ಯ ಸಂಸ್ಥೆ ಭಾರತ ದೇಶವನ್ನು ಈಗಾಗಲೇ ಪೋಲಿಯೋ ಮುಕ್ತ ದೇಶ ಎಂದು ಘೋಷಣೆ ಮಾಡಿದೆ. ಇದಕ್ಕಾಗಿ ಕೇಂದ್ರ ಸರ್ಕಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಭಾರತ ದೇಶವನ್ನು ಈಗಾಗಲೇ ಪೋಲಿಯೋ ಮುಕ್ತ ದೇಶ ಎಂದು ಘೋಷಣೆ ಮಾಡಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರದ ಕಡ್ಡಾಯ ಪೋಲಿಯೋ ಲಸಿಕೆ ಕಾರ್ಯಕ್ರಮ. ಇನ್ನು ಮುಂದೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕಾ ಚುಚ್ಚು ಮದ್ದು ನೀಡಲು ಸಹ  ನಮ್ಮ ರಾಜ್ಯ ಸರ್ಕಾರ ಮುಂದಾಗಿದೆ.

ನವಜಾತ ಶಿಶುಗಳಿಗೆ ಲಸಿಕಾ ಚುಚ್ಚು ಮದ್ದು ನೀಡುವ ನೂತನ ಕಾರ್ಯಕ್ರಮವು ನಮ್ಮ ರಾಜ್ಯದಲ್ಲಿ ಮುಂದಿನ ಏಪ್ರಿಲ್‌ ತಿಂಗಳಿನಿಂದ ಜಾರಿಗೆ ಬರಲಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಮುಂದಿನ 5-6 ವರ್ಷಗಳ ನಂತರ ಹಂತ ಹಂತವಾಗಿ ಬಾಯಲ್ಲಿ ಹಾಕುವ ಲಸಿಕಾ ಪದ್ಧತಿಯನ್ನು ಸ್ಥಗಿತಗೊಳಿಸಿ ಚುಚ್ಚುಮದ್ದು ಮೂಲಕ ಲಸಿಕೆ ನೀಡುವ ಪದ್ಧತಿಯನ್ನೇ ಮುಂದುವರಿಸುವ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಈ ಲಸಿಕಾ ಚುಚ್ಚು ಮದ್ದು ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.ಇದರಿಂದ ಮಕ್ಕಳ ಆರೋಗ್ಯದ ಮೇಲೆ ಯಾವುದೇ ರೀತಿಯಲ್ಲಿ ವ್ಯತಿರಿಕ್ತ ಪರಿಣಾಮವಾಗುವುದಿಲ್ಲ ಎನ್ನುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಚುಚ್ಚುಮದ್ದಿನಲ್ಲಿ ರೋಗಾಣುವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಶಕ್ತಿ ಇರುತ್ತದೆ. ಹೀಗಾಗಿ ಚುಚ್ಚು ಮದ್ದು ನೀಡುವ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಲಸಿಕಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com