ಪ್ಲಾಸ್ಟಿಕ್ ನಿಷೇಧಕ್ಕೆ ರಾಜ್ಯ ಸರ್ಕಾರದಿಂದ ಅಧಿಕೃತ ಅಧಿಸೂಚನೆ

ಹಾಲಿನ ಕವರ್ ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧಕ್ಕೆ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆಯೊಂದನ್ನು ಸೋಮವಾರ ಹೊರಡಿಸಿದೆ...
ಪ್ಲಾಸ್ಟಿಕ್ ನಿಷೇಧಕ್ಕೆ ರಾಜ್ಯ ಸರ್ಕಾರದಿಂದ ಅಧಿಕೃತ ಅಧಿಸೂಚನೆ
ಪ್ಲಾಸ್ಟಿಕ್ ನಿಷೇಧಕ್ಕೆ ರಾಜ್ಯ ಸರ್ಕಾರದಿಂದ ಅಧಿಕೃತ ಅಧಿಸೂಚನೆ
Updated on: 

ಬೆಂಗಳೂರು: ಹಾಲಿನ ಕವರ್ ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧಕ್ಕೆ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆಯೊಂದನ್ನು ಸೋಮವಾರ ಹೊರಡಿಸಿದೆ.

ರಾಜ್ಯ ಸರ್ಕಾರ ಈ ಅಧಿಸೂಚನೆಯಿಂದಾಗಿ ಇನ್ನು ಮುಂದೆ ಅಂಗಡಿ ಮಾಲೀಕರು, ಚಿಲ್ಲರೆ ವ್ಯಾಪಾರಿಗಳು, ಮಾರಾಟಗಾರರು, ಹಾಗೂ ಸಗಟು ಮಾರಾಟಗಾರರು ಇನ್ನು ಮುಂದೆ ನಿಷೇಧಿತ ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದ ಪಕ್ಷದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬಹುದಾಗಿದೆ. ಕಾಯ್ದೆಯಲ್ಲಿ ರು. 5 ಸಾವಿರದಿಂದ 1 ಲಕ್ಷದವರೆಗೂ ದಂಡ ವಿಧಿಸಲು ಹಾಗೂ 3 ರಿಂದ 6 ತಿಂಗಳವರೆಗೂ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ ಇನ್ನು ಮುಂದೆ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಲೋಟ, ತಟ್ಟೆ, ಚಮಚ, ಊಟದ ಮೇಲಿನ ಹಾಕಲಾಗುವ ಕವರ್ ಗಳು, ಭಿತ್ತಿಪತ್ರ, ಮನೆ ಹಾಗೂ ಸಮಾರಂಭಗಳಲ್ಲಿ ಹಾಕಲಾಗುವ ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಧ್ವಜ ಹಾಗೂ ಥರ್ಮೋಕೋಲ್ ಮತ್ತು ಬಟ್ಟೆಗಳಿಗೆ ಉಪಯೋಗಿಸುವ ಗುಂಡಿಗಳು, ಪ್ಲಾಸ್ಟಿಕ್ ನಿಂದ ತಯಾರಾದಂತಹ ಮತ್ತಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಇವುಗಳ ಸಂಗ್ರಹಣೆ, ಸಾಗಾಣಿಕೆ ಹಾಗೂ ವಿತರಣೆಯಲ್ಲೂ ರಾಜ್ಯ ಸರ್ಕಾರ ನಿಷೇಧಿಸಿದೆ.

ಹಾಲು ಮತ್ತು ಹಾಲಿನ ಉತ್ಪನ್ನಗಳ ಕವರ್ ಹಾಗೂ ನರ್ಸರಿಗಳಲ್ಲಿ ಬಳಕೆ ಮಾಡಲಾಗುವ ಪ್ಲಾಸ್ಟಿಕ್ ಚೀಲ ಹಾಗೂ ಪ್ಯಾಕಿಂಗ್ ಸಂದರ್ಭದಲ್ಲಿ ಮಾಡಲಾಗುವ ಸೀಲ್ ಗಳಿಗೆ ಮಾತ್ರ ಪ್ಲಾಸ್ಟಿಕ್ ನಿಷೇಧದಿಂದ ವಿನಾಯಿತಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com