ರಾಜು ಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಸಾಧ್ಯವಿಲ್ಲ: ಸರ್ಕಾರ

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣವನ್ನು ಯಾವುದೇ ಕಾರಣಕ್ಕೂ ನ್ಯಾಯಾಂಗ ತನಿಖೆ ಒಪ್ಪಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ...
ರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತನ ಕುಟುಂಬಕ್ಕೆ ಭೇಟಿ ನೀಡಿ ಪರಿಹಾರ ಧನ ನೀಡಿ ಸಾಂತ್ವನ ಹೇಳುತ್ತಿರುವ ಗೃಹ ಸಚಿವ
ರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತನ ಕುಟುಂಬಕ್ಕೆ ಭೇಟಿ ನೀಡಿ ಪರಿಹಾರ ಧನ ನೀಡಿ ಸಾಂತ್ವನ ಹೇಳುತ್ತಿರುವ ಗೃಹ ಸಚಿವ
Updated on: 

ಬೆಂಗಳೂರು: ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣವನ್ನು ಯಾವುದೇ ಕಾರಣಕ್ಕೂ ನ್ಯಾಯಾಂಗ ತನಿಖೆ ಒಪ್ಪಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಕುರಿತಂತೆ ಬಿಜೆಪಿ ನಾಯಕ ಆರ್. ಅಶೋಕ್, ಸುರೇಶ್ ಕುಮಾರ್ ಹಾಗೂ ಇನ್ನಿತರೆ ನಾಯಕರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್ ಅವರು, ರಾಜು ಹತ್ಯೆ ಪ್ರಕರಣವನ್ನು ಸಿಸಿಬಿ ಈಗಾಗಲೇ ತನಿಖೆ ನಡೆಸುತ್ತಿದೆ. ತನಿಖೆಗೆ ಈಗಾಗಲೇ 4 ತಂಡವನ್ನು ರಚಿಸಲಾಗಿದೆ. ಕೊಲೆಗಾರರನ್ನು ಬಂಧಿಸುವುದು ನಮ್ಮ ಉದ್ದೇಶವಾಗಿದೆಯೇ ವಿನಃ ತನಿಖಾ ತಂಡವನ್ನು ಬದಲಿಸುವುದಲ್ಲ. ಸಿಸಿಬಿ ಅಧಿಕಾರಿಗಳು ವರದಿ ಸಲ್ಲಿಸುವವರೆಗೂ ಕಾಯಬೇಕಿದೆ ಎಂದು ಹೇಳಿದ್ದಾರೆ.

ಅಲ್ಲದೆ, ರಾಜು ಹತ್ಯೆ ನಂತರ ಮೈಸೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಕಾರಣರಾಗಿರುವ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ರಾಜು ಹತ್ಯೆಯನ್ನು ಖಂಡಿಸಿದ್ದ ಬಿಜೆಪಿ ನಾಯಕರು ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಹಾಗೂ ರಾಜು ಕುಟುಂಬಕ್ಕೆ ರು.25 ಲಕ್ಷ ಪರಿಹಾರ ಧನವನ್ನು ನೀಡಬೇಕೆಂದು ಆಗ್ರಹಿಸಿತ್ತು. ಅಲ್ಲದೆ, ಹತ್ಯೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರಣವಾಗಿದ್ದು, ಈ ಸಂಘಟನೆಗೆ ರಾಜ್ಯದಲ್ಲಿ ನಿಷೇಧ ಹೇರಬೇಕೆಂದು ಆಗ್ರಹಿಸಿತ್ತು.

ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಆರ್. ಅಶೋಕ್ ಅವರು, ಹತ್ಯೆ ಪ್ರಕರಣವನ್ನು ಪಾರದರ್ಶಕತೆಯಾಗಿ ಹಾಗೂ ತಾರತಮ್ಯವಿಲ್ಲದಂತೆ ಮಾಡಲು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಹತ್ಯೆ ನಡೆದು 3 ದಿನಗಳು ಕಳೆದಿದೆ. ಆದರೆ, ಪೊಲೀಸರು ಈ ವರೆಗೂ ಒಬ್ಬನನ್ನೂ ಬಂಧಿಸಿಲ್ಲ. ರಾಜು ಜೀವ ಬೆದರಿಕೆ ಕರೆಗಳನ್ನು ಎದುರಿಸುತ್ತಿದ್ದರೆಂದು ಪೊಲೀಸರು ಸ್ಥಳೀಯ ನಾಯಕರಿಗೆ ಹೇಳಿದ್ದಾರೆ. ಇದನ್ನು ಬಿಟ್ಟರೆ ಪೊಲೀಸರು ಈ ವರೆಗೂ ಪ್ರಕರಣ ಸಂಬಂಧ ಏನನ್ನೂ ಮಾಡಿಲ್ಲ. ರಾಜ್ಯ ಗುಪ್ತಚರ ಇಲಾಖೆಗಳು ವಿಫಲವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com