ಕುಡಿಯುವ ನೀರಿಗಾಗಿ ಪ್ರತಿಭಟನೆ: ವೃದ್ಧೆ ಸಾವು

ಕುಡಿಯುವ ನೀರಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದ ವೃದ್ಧೆ ಆಸ್ಪತ್ರೆಯಲ್ಲಿ...
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೃದ್ಧೆ ರೆಮಿ ಗೌಡ(ಎಡಗಡೆಯಿಂದ ಎರಡನೇಯವರು)
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೃದ್ಧೆ ರೆಮಿ ಗೌಡ(ಎಡಗಡೆಯಿಂದ ಎರಡನೇಯವರು)
Updated on: 
ಕಾರವಾರ: ಕುಡಿಯುವ ನೀರಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದ ವೃದ್ಧೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 
ಗೋಕರ್ಣ ಜಿಲ್ಲಾ ಪಂಚಾಯ್ತಿ ಕ್ಷೇತ್ರ ವ್ಯಾಪ್ತಿಯ ಹನೇಹಳ್ಳಿ, ತೊರ್ಕೆ ಹಾಗೂ ನಾಡುಮಾಸ್ಕೇರಿ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ನೀರಿನ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೇಮಿ ಗೌಡ(75)ಎಂಬುವವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 
ಜಿಲ್ಲಾ ಪಂಚಾಯಿತಿ ನೀರು ಪೂರೈಕೆ ಮಾಡುವಲ್ಲಿ ವಿಫಲವಾಗಿದೆ. ಹಾಗಾಗಿ, ನಾನು ಜಿಲ್ಲಾ ಪಂಚಾಯಿತಿ ಕಚೇರಿಯನ್ನು ಮುತ್ತಿಗೆ ಹಾಕುತ್ತೇವೆ ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಮೃತಪಟ್ಟ ವೃದ್ಧೆಯ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com