ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರಾದ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ ಶುಕ್ರವಾರ ನಡೆದ ಸಿದ್ದರಾಮೇಶ್ವರ ಹಾಗೂ ಚಿಕ್ಕತಾಯಮ್ಮ ಜಾತ್ರಾ ಮಹೋತ್ಸವದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್ ಯಾವುದೇ ಹಾನಿ ಸಂಭವಿಸಿಲ್ಲ.
ಇಂದು ಬೆಳಗ್ಗೆ ಜಾತ್ರೆ ನಡೆಯುತ್ತಿದ್ದ ಸಂಧರ್ಭದಲ್ಲಿ ಭಕ್ತರ ಕೈಯಲ್ಲಿದ್ದ ಸಾಂಪ್ರದಾಯಿಕ ಅಲಂಕಾರಿಕ ಕೊಡೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಯನ್ನು ನಂದಿಸಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಈ ಜಾತ್ರೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.