ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರದ ನಿವೃತ್ತ ಐಎಎಸ್ ಅಧಿಕಾರಿ 64 ವರ್ಷದ ದತ್ತಾತ್ರೇಯ ಬನ್ಸೋಡ್ ಸೇರಿ ಮೂವರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.