ಬೆಂಗಳೂರು: ರಾಜ್ಯಾದ್ಯಂತ ಕಳಸಾ ಬಂಡೂರಿ ಪ್ರತಿಭಟನೆ ತೀವ್ರಗೊಂಡಿದ್ದು, ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಶನಿವಾರ ಬೆಂಗಳೂರಿನಲ್ಲಿ ಬಹೃತ್ ಪ್ರತಿಭಟನಾ ರ್ಯಾಲಿ ನಡೆಸಿವೆ.
ನಗರದ ಮೈಸೂರು ಬ್ಯಾಂಕ್ ವೃತ್ತ, ಶಿವಾಜಿನಗರ ಸೇರಿದಂತೆ ಹಲವೆಡೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜು, ಸಾರಾ ಗೋವಿಂದು ಮತ್ತಿತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕರರ ನಡುವೆ ವಾಗ್ವಾದ ನಡೆಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನು ಪ್ರತಿಭಟನೆಯ ಬಿಸಿ ವಾಹನ ಸವಾರರಿಗೆ ತಟ್ಟಿದೆ. ಮೈಸೂರು ಬ್ಯಾಂಕ್ ವೃತ್ತದ ಸುತ್ತಾಮುತ್ತಾ ಟ್ರಾಪಿಕ್ ಜಾಮ್ ಸಮಸ್ಯೆ ಎದುರಾಗಿದೆ.