

ಬೆಂಗಳೂರು: ವೆಂಕಟಪ್ಪ ಆರ್ಟ್ ಗ್ಯಾಲರಿ ಖಾಸಗೀಕರಣ ಮಾಡಬಾರದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಎಚ್ ಡಿ ದೇವೇಗೌಡರು, ವೆಂಕಟಪ್ಪ ಆರ್ಟ್ ಗ್ಯಾಲರಿ ನಮ್ಮ ರಾಜ್ಯದ ಹಿರಿಮೆಯ ಸಂಕೇತ ಹಾಗೂ ನಮ್ಮ ಸಂಸ್ಕೃತಿಯ ಪ್ರತೀಕ.
ಈ ವಿಚಾರದಲ್ಲಿ ಮುಖ್ಯಮಂತಿರ ಯಾವುದೇ ಲಾಬಿಗೆ ಮಣಿಯಬಾರದು. ರಾಜ್ಯದ ಕಲಾ ಆಸಕ್ತರ ಸ್ವಾಭಿಮಾನದ ಸಂಕೇತವಾಗಿರುವ ವೆಂಕಟಪ್ಪ ಕಲಾ ಗ್ಯಾಲರಿಯನ್ನು ಉಳಿಸುವುದು ರಾಜ್ಯ ಸರ್ಕಾರದ ಕರ್ತವ್ಯ. ಹಾಗಾಗಿ, ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ದೇವೇಗೌಡರು ಪತ್ರದ ಮೂಲಕ ಮನವಿ ಮಾಡಿದ್ದಾರೆ.