ಆರ್‌ಎಸ್‌ಎಸ್ ರಾಜು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ವಿಧಾನಸಭೆಯಲ್ಲಿ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಗೃಹ ಸಚಿವ ಜಿ ಪರಮೇಶ್ವರ್, ರಾಜು ಕೊಲೆ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ತಂಡ ಭೇಟಿ ನೀಡಿ ಹಂತಕರ ಬಗ್ಗೆ ಮಾಹಿತಿ ಕಲೆ ಹಾಕಿದ್ದು, 64 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿಸಿದ್ದಾರೆ.