ರಾಜ್ಯದ ಹಳ್ಳಿಗಳಲ್ಲಿ ಶುದ್ಧ ನೀರಿನ 1,000 ಘಟಕಗಳು ಆರಂಭ

ರಾಜ್ಯದಾದ್ಯಂತ 7,300 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಫಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ 1,000 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ 1,000 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್
ಬೆಂಗಳೂರು: ರಾಜ್ಯದಾದ್ಯಂತ 7,300 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಫಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ 1,000 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮಂಗಳವಾರ ಸಿದ್ದರಾಮಯ್ಯನವರು ಉದ್ಘಾಟಿಸಿದರು. 
ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಸಲು ಸರ್ಕಾರ ಬದ್ಧವಾಗಿದೆ. ಅಷ್ಟೇ ಅಲ್ಲದೇ, ರಾಜ್ಯಾದ್ಯಂತ 7,300 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಶುದ್ಧ ಕುಡಿಯುವ ನೀರು ಪೂರೈಸಲು 62 ಟಿಎಂಸಿ ಅಡಿ ನೀರಿನ ಪ್ರಮಾಣ ಬೇಕಿದೆ ಹಾಗೂ ಇದಕ್ಕೆ ತಗಲುವ ವೆಚ್ಚ ರು.45 ಸಾವಿರ ಕೋಟಿ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com