ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಎರಡನೇ ಬಾರಿಗೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೀಗ ಏಪ್ರಿಲ್ 12ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ಮಾರ್ಚ್ 21ರಂದು ನಡೆದ ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇಂದು ಪರೀಕ್ಷೆ ನಡೆಸಲು ನಿಗದಿಪಡಿಲಾಗಿತ್ತು. ಆದರೆ ಇಂದು ಮತ್ತೆ ಸೋರಿಕೆ ಪುನರಾವರ್ತನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಯಲಿಲ್ಲ. ಇದೀಗ ಏಪ್ರಿಲ್ 12ರಂದು ದಿನಾಂಕ ನಿಗದಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಆತಂಕಪಡುವ ಅಗತ್ಯವಿಲ್ಲ. ನಿರಾತಂಕವಾಗಿ ಪರೀಕ್ಷೆಗೆ ತಯಾರಿ ನಡೆಸಲಿ. ಮುಂದಿನ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
Advertisement