
ಬೆಂಗಳೂರು: ರಜನಿಕಾಂತ್ರ ಹೊಸ ಸಿನಿಮಾ ಬಿಡುಗಡೆ ವೇಳೆಯಲ್ಲಿ ಅವರ ಕಟೌಟ್ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುವ ಪದ್ಧತಿ ನಿಷೇಧಿಸುವ ಸಂಬಂಧ ಬೆಂಗಳೂರಿನ ಮೇಯೋ ಹಾಲ್ ಕೋರ್ಟ್ ರಜನಿ ಕಾಂತ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಕೊನೆಯುಸಿರೆಳೆಯುತ್ತಿದ್ದಾರೆ. ಬಡತನದ ಬೇಗೆಯಲ್ಲಿ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ. ಇಂಥ ಪರಿಸ್ಥಿತಿಯಲ್ಲಿ ರಜನಿಕಾಂತ್ ಅಭಿಮಾನಿಗಳು ಸಾವಿರಾರು ಲೀಟರ್ ಹಾಲನ್ನು ಕಟೌಟ್ಗೆ ಅಭಿಷೇಕ ಮಾಡಿ ವ್ಯರ್ಥ ಮಾಡುತ್ತಿದ್ದಾರೆ. ಆದ್ದರಿಂದ ಕಟೌಟ್ಗೆ ಹಾಲಿನ ಅಭಿಷೇಕ ಮಾಡುವುದನ್ನು ನಿಷೇಧಿಸುವಂತೆ ಮನವಿ ಮಾಡಿ ಮಣಿವಣ್ಣನ್ ಎಂಬುವರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯ, ಪ್ರಕರಣದ ಬಗ್ಗೆ ರಜನಿಕಾಂತ್ ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏ. 11ಕ್ಕೆ ಮುಂದೂಡಿದೆ.
Advertisement