ಕಳಸಾ-ಬಂಡೂರಿ ವಿವಾದ ಕುರಿತು ಮತ್ತೆ ಪ್ರಧಾನಿ ಭೇಟಿ: ಸಿಎಂ

ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕಳಸಾ ಬಂಡೂರಿ ವಿವಾದ ಬಗೆಹರಿಸಲು ಮಧ್ಯೆಪ್ರವೇಶಿಸುವಂತೆ
ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 
ಬಳ್ಳಾರಿ: ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕಳಸಾ ಬಂಡೂರಿ ವಿವಾದ ಬಗೆಹರಿಸಲು ಮಧ್ಯೆಪ್ರವೇಶಿಸುವಂತೆ ಕೋರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
ಬಳ್ಳಾರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮಂತ್ರಿಗಳು ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಕರೆದು ಚರ್ಚೆ ನಡೆಸಬೇಕು. ಈ ಕುರಿತು ಪ್ರಧಾನಿ ಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದ ಅವರು, ಪ್ರಧಾನಿಗಳಿಗೆ ಮತ್ತೊಮ್ಮೆ ಮಹಾದಾಯಿ ವಿಚಾರ ಕುರಿತು ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. 
ಕಳಸಾ -ಬಂಡೂರಿ ವಿವಾದ ಬಗೆಹರಿಸಲು ಮಧ್ಯೆಪ್ರವೇಶಿಸುವಂತೆ ಕೊರಿ ಪ್ರಧಾನಿಯವರಿಗೆ ಮತ್ತೊಮ್ಮೆ ಪತ್ರ ಬರೆಯಲಾಗಿದೆ. ಉತ್ತರ ಕರ್ನಾಟಕ ಭಾಗದ ಜನ ಯೋಜನೆ ಜಾರಿಗೆ ಆಗ್ರಹಿಸಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದರೆ, ಗೋವಾ ಸರ್ಕಾರ ಮಾತ್ರ ರಾಜ್ಯದ ಮನವಿಯನ್ನು ಪರಿಗಣಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಪ್ರಧಾನಿಯವರೇ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಕೋರಲಾಗಿದೆ ಎಂದು ತಿಳಿಸಿದ್ದಾರೆ. 
ಬರ ಪೀಡಿತ ಪ್ರದೇಶಗಳಿಗೆ ನಿನ್ನೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ತದ ನಂತರ ಮಾತನಾಡಿ, 20 ಖಾಸಗಿ ಕೊಳವೆ ಬಾವಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕೊಳವೆಬಾವಿಗಳಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೂರನೇ ಹಂತದ ಬರ ಪೀಡಿತ ಪ್ರದೇಶಗಳ ಪ್ರವಾಸವನ್ನು ನಿನ್ನೆ ಆರಂಭಿಸಿದರು. ಮೊದಲ ದಿನ ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com