ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಮೂರು ಶಿಕ್ಷಕರ ಮತ್ತು ಎರಡು ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು...
ಕರ್ನಾಟಕ ವಿಧಾನ ಪರಿಷತ್
ಕರ್ನಾಟಕ ವಿಧಾನ ಪರಿಷತ್
Updated on

ಬೆಂಗಳೂರು: ಮೂರು ಶಿಕ್ಷಕರ ಮತ್ತು ಎರಡು ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಘೋಷಿಸಿದೆ.

ವಾಯುವ್ಯ ಪದವೀಧರರ ಕ್ಷೇತ್ರದಿಂದ ಸ್ಥಾನಿಕ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕೌಜಲಗಿ ಅವರನ್ನು, ದಕ್ಷಿಣ ಪದವೀಧರ ಕ್ಷೇತ್ರದಿಂದ ಹೆಚ್.ಎನ್. ರವೀಂದ್ರ, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ನಿಂಗಪ್ಪ ಬಸಪ್ಪ ಬನ್ನೂರು, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಟಿ.ಈಶ್ವರ್ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಿರಂಜನ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ವಿಧಾನಪರಿಷತ್ ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಸದ್ಯದಲ್ಲಿಯೇ ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com