ಸಿಇಟಿ ಪ್ರಶ್ನೆ ಪತ್ರಿಕೆಯನ್ನೂ ಸೋರಿಕೆ ಮಾಡಲು ಯೋಜಿಸಿದ್ದ ಶಿವಕುಮಾರಯ್ಯ!

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಶಿವಕುಮಾರಯ್ಯ ಅಲಿಯಾಸ್ ಗುರೂಜಿ ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ ಸಿಇಟಿ ಪ್ರಶ್ನೆ ಪತ್ರಿಕೆಗಳೂ ಈ ವೇಳೆಗೆ ಸೋರಿಕೆಯಾಗುತ್ತಿದ್ದವು!
ಶಿವಕುಮಾರಯ್ಯ
ಶಿವಕುಮಾರಯ್ಯ

ಬೆಂಗಳೂರು: ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಶಿವಕುಮಾರಯ್ಯ ಅಲಿಯಾಸ್ ಗುರೂಜಿ ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ ಸಿಇಟಿ ಪ್ರಶ್ನೆ ಪತ್ರಿಕೆಗಳೂ ಈ ವೇಳೆಗೆ ಸೋರಿಕೆಯಾಗುತ್ತಿದ್ದವು! 
ಆದರೆ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಈತನ ಪಾತ್ರ ಸ್ಪಷ್ಟವಾಗಿ, ಬಂಧನಕ್ಕೊಳಗಾಗಿರುವುದರಿಂದ ಸಿಇಟಿ ಪ್ರಶ್ನೆ ಪತ್ರಿಕೆ ಸೋರಿಕೆ ಯೋಜನೆ ವಿಫಲವಾಗಿದೆ. ದ್ವಿತೀಯ ಪಿಯು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ವೇಳೆ ಈ ಮಾಹಿತಿ ಬಹಿರಂಗವಾಗಿದ್ದು, ಸಿಇಟಿ ಪ್ರಶ್ನೆ ಪತ್ರಿಕೆ ಸೋರಿಕೆ ಯೋಜನೆಯಲ್ಲೂ ಶಿವಕುಮಾರಯ್ಯನ ಪ್ರಮುಖ ಪಾತ್ರ ವಿರುವುದನ್ನು ಸಿಐಡಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.   
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹಣದ ವಹಿವಾಟು ನಡೆಸಿರುವ ಬಗ್ಗೆ ಶಿವಕುಮಾರಯ್ಯನನ್ನು ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು, ಸಿಇಟಿ ಪ್ರಶ್ನೆ ಪತ್ರಿಕೆ ಸೋರಿಕೆಗಾಗಿ ಒಂದು ಲಕ್ಷಕ್ಕಿಂತ ಹೆಚ್ಚು ಬಂಡವಾಳ ಹೂಡಲಾಗಿತ್ತು ಹಾಗೂ ಹಣ ವರ್ಗಾವಣೆ ವ್ಯವಹಾರಗಳು ಗಾಂಧಿನಗರದ ಹೊಟೇಲ್ ಗಳಲ್ಲಿ ನಡೆಯುತ್ತಿತ್ತು ಎಂದು ಶಂಕಿಸಿದ್ದಾರೆ. ಸಿಐಟಿ ಸೆಲ್ ನೊಂದಿಗೆ ಶಿವಕುಮಾರಯ್ಯ ನೇರ ಸಂಪರ್ಕ ಹೊಂದಿಲ್ಲವಾದರೂ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ನೆರವಾದವರ ಮೂಲಕ ಸಿಇ ಟಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಯೋಜನೆ ರೂಪಿಸಲಾಗಿತ್ತು ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com