ಪೇದೆ ಮೇಲೆ ಹಲ್ಲೆ ಪ್ರಕರಣ: ಮೈತ್ರಿಯಾಗೆ ಜಾಮೀನು ಮಂಜೂರು

ಕರ್ತವ್ಯನಿರತ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ...
ಮೈತ್ರಿಯಾ ಗೌಡ
ಮೈತ್ರಿಯಾ ಗೌಡ
ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಮೈತ್ರಿಯಾ ಗೌಡಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 
ಪೇದೆ ಮೇಲೆ ಹಲ್ಲೆ ಪರ್ಕರಣಕ್ಕೆ ಸಂಬಂಧಸಿದಂತೆ 5ನೇ ಎಸಿಎಂಎಂ ನ್ಯಾಯಾಲಯವು 2 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೈತ್ರಿಯಾ ಗೌಡ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.  
2011ರಲ್ಲಿ ಕಾರು ಚಾಲನೆ ಮಾಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದನ್ನು ಪ್ರಶ್ನಿಸಿದ್ದ ಬಸವೇಶ್ವರನಗರ ಸಂಚಾರ ಠಾಣೆ ಮುಖ್ಯಪೇದೆ ಶಿವಕುಮಾರ್ ಮೇಲೆ ಮೈತ್ರಿಯಾ ಗೌಡ ಹಾಗೂ ಆಕೆಯ ಸಂಬಂಧಿಗಳು ಹಲ್ಲೆ ನಡೆಸಿದ್ದರು. ಈ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ನಟಿ ಮೈತ್ರಿಯಾ ಗೌಡ ಹಾಗೂ ಆಕೆಯ ಸಹೋದರಿ ಸೇರಿ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಿದೆ. ಮೈತ್ರಿಯಾ ಗೌಡಗೆ ಎರಡು ವರ್ಷ ಜೈಲು ಶಿಕ್ಷೆ, ರು.300 ಸಾವಿರ ದಂಡ ಹಾಗೂ ಆಕೆಯ ಸಹೋದರಿ ಸುಪ್ರಿಯಾ, ಸಂಬಂಧಿಗಳಾದ ರೂಪಾ ಮತ್ತು ರೇಖಾಗೆ ತಲಾ 1 ವರ್ಷ ಜೈಲು ಶಿಕ್ಷೆ ಮತ್ತು ತಲಾ ರು.1 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿತ್ತು. 
ಈ ಹಿಂದೆ ಮೈತ್ರಿಯಾ ಗೌಡ ಅವರು ಕೇಂದ್ರ ಕಾನೂನು ಸಚಿವ ಸದಾನಂದ ಗೌಡರ ಪುತ್ರ ಕಾರ್ತಿಕ್ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಆರೋಪ ಮಾಡಿ ಸುದ್ದಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com