ಎಸ್ಎಸ್ಎಲ್ ಸಿ ಫಲಿತಾಂಶ ಸಿದ್ಧ; ಸಚಿವರಿಂದ ದಿನಾಂಕ ನಿಗದಿಯೊಂದೇ ಬಾಕಿ
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯಗೊಂಡು ಫಲಿತಾಂಶ ಸಿದ್ಧವಾಗಿದ್ದು, ಶಿಕ್ಷಣ ಸಚಿವರು ಫಲಿತಾಂಶ ನಿಗದಿಪಡಿಸುವ ಕಾರ್ಯವೊಂದು ಬಾಕಿ ಇದೆ ಎಂದು ತಿಳಿದುಬಂದಿದೆ.
ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿರುವಂತೆ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸಂಬಂಧ ಎಲ್ಲ ರೀತಿಯ ಕಾರ್ಯಗಳು ಪೂರ್ಣಗೊಂಡಿದ್ದು, ಫಲಿತಾಂಶ ಪಟ್ಟಿ ಕೂಡ ಸಿದ್ಧವಾಗಿದೆ. ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ ಅವರಿಂದ ಫಲಿತಾಂಶ ಪ್ರಕಟಣೆಗೆ ಗ್ರೀನ್ ಸಿಗ್ನಲ್ ದೊರೆತ ಬಳಿಕ ದಿನಾಂಕ ನಿಗದಿ ಮಾಡಿ ಫಲಿತಾಂಶ ಘೋಷಣೆ ಮಾಡುತ್ತೇವೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮಂಗಳವಾರ ಫಲಿತಾಂಶ ದಿನಾಂಕ ನಿಗದಿಗಾಗಿ ಕರೆಯಲಾಗಿದ್ದ ಅಧಿಕಾರಿಗಳ ಸಭೆ ದಿನಾಂಕ ನಿಗದಿಪಡಿಸುವಲ್ಲಿ ವಿಫಲವಾಗಿತ್ತು. ಈ ಹಿನ್ನಲೆಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ಮೇ 25ರಂದು ಎಸ್ಎಸ್ಎಲ್ ಸಿ ಫಲಿತಾಂಶ ಘೋಷಣೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ