624 ಅಂಕ ಪಡೆದು ದ್ವಿತೀಯ ಸ್ಥಾನದಲ್ಲಿ 6 ಬಾಲಕೀಯರು, ಓರ್ವ ಬಾಲಕ

2015-16ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: 2015-16ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಯ ವಿದ್ಯಾರ್ಥಿ ಎಸ್.ರಂಜನ್ ಅವರು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಏಳು ವಿದ್ಯಾರ್ಥಿಗಳು 624 ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಬೆಂಗಳೂರಿನ ಬನಶಂಕರಿಯ ಹೋಲಿ ಚೈಲ್ಡ್ ಶಾಲೆಯ ವಿದ್ಯಾರ್ಥಿನಿ ಎಂ.ಎ.ಸುಪ್ರೀತಾ, ಬೆಂಗಳೂರಿನ ನಾಗರಬಾವಿಯಲ್ಲಿರುವ ಸೇಂಟ್ ಸೋಫಿಯಾ ಕಾನ್ವೆಂಟ್ ನಎಸ್ ಶ್ವೇತಾ, ಮೈಸೂರಿನ ಮರಿಮಲ್ಲಪ್ಪ ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಎಸ್.ಈಶು, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶ್ರೀದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಿಮಾ ಮಂಜುನಾಥ್ ಭಟ್, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೇಂಟ್ ಮೇರಿ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಯು.ಕೆ.ಶುಶೃತಾ, ಹಾಸನ ಜಿಲ್ಲೆಯ ಕೆ.ಆರ್.ಪುರಂನ ಸಿಕೆಎಸ್ ಗರ್ಲ್ಸ್ ಶಾಲೆಯ ವಿದ್ಯಾರ್ಥಿನಿ ಎಸ್.ಸ್ವಾತಿ ಹಾಗೂ ಮೈಸೂರಿನ ಕುವೆಂಪುನಗರದ ವಿಜಯ ವಿಠ್ಠಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕೆ.ಅಕ್ಷಯ್ ರಾವ್ ಅವರು 625ಕ್ಕೆ 624 ಅಂಕ ಪಡೆದು ದ್ವೀತಿಯ ಸ್ಥಾನದಲ್ಲಿದ್ದಾರೆ.
ಮೈಸೂರಿನ ಕುವೆಂಪುನಗರದ ವಿಜಯ ವಿಠ್ಠಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಟಿ.ಎಸ್ ಶ್ರೀನಿಧ, ಹಾಸನ ಜಿಲ್ಲೆಯ ಚಿಕ್ಕಹೊನ್ನೇನಹಳ್ಳಿಯ ವಿಜಯ ಪ್ರೌಢಶಾಲೆಯ ವಿದ್ಯಾರ್ಥಿನಿ ಎಚ್.ಎಸ್. ಭಾರ್ಗವಿ, ಸಿಂಚನ ಎಸ್.ಗೌಡ ಹಾಗೂ ಮೈಸೂರಿನ ಸದ್ವಿದ್ಯಾ ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಐಶ್ವರ್ಯ ಅವರು 623 ಅಂಕಗಳಿಸಿ ತೃತೀಯ ಸ್ಥಾನ ಗಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com