ಹೆಬ್ಬಗೋಡಿ ರೆಸ್ಟೋರೆಂಟ್ ಒಂದರಲ್ಲಿ ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದಾರೆ. ಈ ವೇಳೆ ಈ ಮೂವರು ಯುವಕರು ಮದ್ಯಪಾನ ಮಾಡಿದ್ದಾರೆ. ಯುವತಿಗೆ ಸಿಗರೇಟ್ ಸೇದುವ ಚಟವಿತ್ತು. ಪಾರ್ಟಿ ಮುಗಿಸಿ ಹೋಗಬೇಕಾದರೆ, ಸಿಗರೇಟು ನೀಡುತ್ತೇವೆ ಎನ್ನುವ ನೆಪದಲ್ಲಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋದ ಸ್ನೇಹಿತರು... ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ತದ ನಂತರ ಅವರಿಂದ ತಪ್ಪಿಸಿಕೊಂಡ ಯುವತಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಯುವತಿಯ ಮೇಲೆ ಅತ್ಯಾಚಾರವಾಗಿರುವುದಾಗಿ ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ.