ಬೆಂಗಳೂರಿನ ಜೆಪಿನಗರದಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ

ದಿನಗೂಲಿ ನೌಕರನೊಬ್ಬ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಜೆಪಿನಗರದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ದಿನಗೂಲಿ ನೌಕರನೊಬ್ಬ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಜೆಪಿನಗರದ ಮೊದಲನೇ ಹಂತದಲ್ಲಿ ಶುಕ್ರವಾರ ನಡೆದಿದೆ. 
ರಾಗಿಗುಡ್ಡ ದೇವಸ್ಥಾನದ ಬಳಿಯಿರುವ ಮನೆಯೊಂದರಲ್ಲಿ ಅಪ್ರಾಪ್ತೆಯ ಮೇಲೆ ದಿನಗೂಲಿ ನೌಕರ ಅತ್ಯಾಚಾರವೆಸಗಿದ್ದಾನೆ.
ಬಾಲಕಿಯ ಪೋಷಕರು ದಿನಗೂಲಿ ನೌಕರರಾಗಿದ್ದು, ಪ್ರತಿನಿತ್ಯದಂತೆ ಕೆಲಸಕ್ಕೆ ತೆರಳಿದ್ದಾರೆ. ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಆಂಟೋನಿ, ಮನೆಗೆ ನುಗ್ಗಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. 
ಪೋಷಕರು ಮನೆಗೆ ಬಂದ ನಂತರ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇಬ್ಬರನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com