ಬೆಂಗಳೂರು: 50 ವರ್ಷದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ಕಿಡಿಗೇಡಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹುಳಿಮಾವಿನಲ್ಲಿರುವ ಇರಿಸ್ ಲೇಔಟ್ ನಲ್ಲಿ ಶುಕ್ರವಾರ ನಡೆದಿದೆ.
ಕಾರ್ಪೇಂಟರ್ ಸತೀಶ್ ಮತ್ತು ಆತನ ಸ್ನೇಹಿತ ದಿನಗೂಲಿ ನೌಕರ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು.
ಚಿಕ್ಕಮ್ಮನಹಳ್ಳಿ ನಿವಾಸಿಯಾಗಿರುವ ಆ ಮಹಿಳೆ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗಬೇಕಾದರೆ ಆಕೆಯನ್ನು ಸತೀಶ್ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ತದ ನಂತರ ತನ್ನ ಸ್ನೇಹಿತನಿಗೆ ಕರೆ ಮಾಡಿ ಕರೆಸಿಕೊಂಡು, ಇಬ್ಬರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಸಂತ್ರಸ್ತೆಯ ಸ್ನೇಹಿತರಾಗಿದ್ದ ಸಂತೋಷ್ ಎಂಬುವವರ ಮನೆಯಲ್ಲಿ ಸತೀಶ್ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ. ಅತ್ಯಾಚಾವೆಸಗಿದ ನಂತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಅತ್ಯಾಚಾರಕ್ಕೊಳಗಾದ ಮಹಿಳೆ ಮನೆಗೆ ಬಂದು ವಿಷಯ ತಿಳಿಸಿದ್ದು, ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಗಳ ಹುಡುಕಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ.