ಬಿಎಂಟಿಸಿಯಿಂದ ಚತುರ ಸಾರಿಗೆ ವ್ಯವಸ್ಥೆ

ಬಿಎಂಟಿಸಿ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಿ ಹೆಚ್ಚು ಪ್ರಯಾಣಿಕರನ್ನು ಸೆಳೆಯುವ ಉದ್ದೇಶದಿಂದ‘ಚತುರ ಸಾರಿಗೆ ವ್ಯವಸ್ಥೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಬಿಎಂಟಿಸಿ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಿ ಹೆಚ್ಚು ಪ್ರಯಾಣಿಕರನ್ನು ಸೆಳೆಯುವ ಉದ್ದೇಶದಿಂದ‘ಚತುರ ಸಾರಿಗೆ ವ್ಯವಸ್ಥೆ (‘ಇಂಟೆಲಿಜೆಂಟ್‌ ಟ್ರಾನ್ಸ್‌ಪೋರ್ಟ್‌ ಸಿಸ್ಟಮ್‌–ಐಟಿಎಸ್‌’) ನಾಳೆಯಿಂದ(ಮೇ 25) ಜಾರಿಗೆ ಬರಲಿದೆ.

ಒಂದೂವರೆ ವರ್ಷದಿಂದ ಯಲಹಂಕ ಡಿಪೊದಲ್ಲಿ (ಡಿಪೊ ಸಂಖ್ಯೆ 11) ಪ್ರಾಯೋಗಿಕವಾಗಿ ಈ ಯೋಜನೆ ಜಾರಿಯಲ್ಲಿದೆ. ಬಿಎಂಟಿಸಿಯಲ್ಲಿ ನಾಳೆ ಮಧ್ಯಾಹ್ನ 12.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಟಿಎಸ್‌ಗೆ ಚಾಲನೆ ನೀಡಲಿದ್ದಾರೆ.

ಬಿಎಂಟಿಸಿ ಸಂಸ್ಥೆಯ ಆಡಳಿತ ವ್ಯವಸ್ಥೆ, ಪ್ರಯಾಣಿಕರು–ನಿರ್ವಾಹಕರ ನಡುವಿನ ಕಿತ್ತಾಟ, ಬಸ್‌­ಗಳ ವೇಳಾಪಟ್ಟಿ ಬದಲು, ಬಸ್‌ಗಳ ವಿಳಂಬ ಮತ್ತಿತರ ವಿಷಯಗಳ ಬಗ್ಗೆ ಪ್ರತಿನಿತ್ಯ ನೂರಾರು ಮಂದಿ ದೂರು ನೀಡುತ್ತಾರೆ. ಅಲ್ಲದೆ ಬಸ್‌ಗಳ ಕಾರ್ಯಾ­ಚ­ರಣೆಯ ಸಮಗ್ರ ನಿರ್ವಹಣೆಗೆ ಕಣ್ಗಾವಲು ವ್ಯವಸ್ಥೆಯೂ ಇರಲಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸಂಸ್ಥೆ ಮುಂದಾಗಿದೆ.

ವೆಹಿಕಲ್ ಟ್ರ್ಯಾಕಿಂಗ್ ಸಿಸ್ಟಮ್: ‘ಈ ವ್ಯವಸ್ಥೆಯ ಮೂಲಕ 6,400 ಬಸ್‌­ಗಳಿಗೂ ಜಿಪಿಎಸ್ ಅಳವಡಿಸಿ ಕೇಂದ್ರ ಕಚೇರಿ­­ಯಲ್ಲಿರುವ ನಿಯಂತ್ರಣಾ ಕೊಠಡಿಯಿಂದಲೇ ಮೇಲ್ವಿಚಾರಣೆ ನೋಡಿಕೊಳ್ಳುತ್ತೇವೆ. ಬಸ್‌­ಗಳಲ್ಲಿ ಆಗುವ ಕ್ಷಣ ಕ್ಷಣದ ಬೆಳವಣಿಗೆಗಳನ್ನು ನಿಯಂತ್ರಣ ಕೊಠಡಿಯಲ್ಲೇ ಇದ್ದುಕೊಂಡು ವೀಕ್ಷಿಸಬಹುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಈ ವ್ಯವಸ್ಥೆ ಮೂಲಕ ಬಸ್ ಎಲ್ಲಿದೆ, ಎಷ್ಟು ಪ್ರಯಾಣಿಕರು ಇದ್ದಾರೆ ಎಂಬುದೂ ಸೇರಿದಂತೆ ಬಸ್‌ನ ಸಮಗ್ರ ಚಿತ್ರಣ ದೊರಕಲಿದೆ. ಇಲ್ಲಿ ದ್ವಿಮುಖ ಸಂವಹನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಬಹುತೇಕ ಬಸ್‌ಗಳಿಗೆ ಜಿಪಿಎಸ್‌ ಅಳವಡಿಸಲಾಗಿದೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com