ಉಗ್ರರ ಬೆದರಿಕೆ: ಬೇಲೂರು ಚನ್ನಕೇಶವ ಮತ್ತು ಹೊಯ್ಸಳೇಶ್ವರ ದೇವಾಲಯಕ್ಕೆ ಬಿಗಿ ಭದ್ರತೆ

ಹಾಸನದ ಬೇಲೂರು, ಹಳೇ ಬೀಡಿನ, ಚನ್ನಕೇಶವ ಮತ್ತು ಹೊಯ್ಸಳೇಶ್ವರ ದೇವಾಲಯಗಳಿಗೆ ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಹೆಚ್ಚಿಸಲಾಗಿದೆ...
ಬೇಲೂರಿನ ಚನ್ನಕೇಶವ ದೇವಾಲಯ
ಬೇಲೂರಿನ ಚನ್ನಕೇಶವ ದೇವಾಲಯ

ಹಾಸನ: ಹಾಸನದ ಬೇಲೂರು, ಹಳೇ ಬೀಡಿನ, ಚನ್ನಕೇಶವ ಮತ್ತು ಹೊಯ್ಸಳೇಶ್ವರ ದೇವಾಲಯಗಳಿಗೆ ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಹೆಚ್ಚಿಸಲಾಗಿದೆ.

ಪಾಕಿಸ್ತಾನದ ಉಗ್ರ ಸಂಘಟನೆಯೊಂದು ಚನ್ನಕೇಶವ ಮತ್ತು ಹೊಯ್ಸಳೇಶ್ವರ ದೇವಾಲಯಗಳ ಮೇಲೆ ಕಣ್ಣಿಟ್ಟಿವೆ ಎಂದು ಕಳೆದ 15 ದಿನಗಳ ಹಿಂದೆ ಗುಪ್ತಚರ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಪ್ರಾಚ್ಯ ಸಂಶೋಧನಾ ಇಲಾಖೆ ಮತ್ತು ದೇವಾಲಯ ಅಭಿವೃದ್ಧಿ ಸಮಿತಿಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಗುಪ್ತಚರ ಇಲಾಖೆ ಸೂಚಿಸಿದೆ,

ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತರನ್ನು ಪರಿಶೀಲಿಸಿ, ಯಾವುದೇ ಲೋಹದ ವಸ್ತುಗಳನ್ನು ಕೊಂಡೊಯ್ಯದಂತೆ ಸೂಚಿಸಲಾಗುತ್ತಿದೆ.

ದೇವಾಲಯದ ಸುತ್ತಮುತ್ತ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದ್ದು, ದೇವಾಲಯದ ಸುತ್ತ ಸುಮಾರು 25 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇನ್ನೂ ಹೋಟೆಲ್ ಹಾಗೂ ಅತಿಥಿ ಗೃಹಗಳಿಗೆ ಬರುವ ಪ್ರವಾಸಿಗರ ಗುರುತಿನ ಚೀಟಿ ಪರಿಶೀಲನೆ ಮಾಡುವಂತೆ ಹೋಟೆಲ್ ಮಾಲೀಕರುಗಳಿಗೆ ಸೂಚಿಸಲಾಗಿದೆ. ಜೊತೆಗೆ ಹೋಟೆಲ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಅನುಮಾನ ಬಂದರೇ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com