ರಾಜ್ಯ

ಕಲಬುರ್ಗಿ: ದ್ವಿತೀಯ ಪಿಯುಸಿಯಲ್ಲಿ ಫೇಲ್; ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ...

ಕಲಬುರ್ಗಿ: ದ್ವಿತೀಯ ಪಿಯುಸಿಯಲ್ಲಿ ಫೇಲ್; ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :
ಕಲಬುರ್ಗಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದನ್ನೂರು ಗ್ರಾಮದ ಅರವಿಂದ್ ಕಾಂಬ್ಳೆ ಎಂದು ಗುರುತಿಸಲಾಗಿದೆ.
ಅರವಿಂದ್ ದ್ವಿತೀಯ ಪಿಯುಸಿಯಲ್ಲಿ ಇಂಗ್ಲೀಷ್ ಹಾಗೂ ಇತಿಹಾಸ ವಿಷಯದಲ್ಲಿ ಫೇಲ್ ಆಗಿದ್ದ. ಹೀಗಾಗಿ ನೊಂದ ವಿದ್ಯಾರ್ಥಿ ಗುರುವಾರ ಸಂಜೆ ತನ್ನ ಹೊಲದಲ್ಲಿ ಕೀಟನಾಶಕ ಕುಡಿದಿದ್ದು, ಕೂಡಲೇ ಆತನನ್ನು ಕಲಬುರ್ಗಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ ಎಂದುಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.