ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆ, ಟ್ರಾಫಿಕ್ ಜಾಮ್

ಬೆಂಗಳೂರಿನಲ್ಲಿ ವಿಧಾನಸೌಧ, ಶಿವಾಜಿನಗರ ಹಾಗೂ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ ಸುರಿಯುತ್ತಿದ್ದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಬೆಂಗಳೂರಿನಲ್ಲಿ ವಿಧಾನಸೌಧ, ಶಿವಾಜಿನಗರ ಹಾಗೂ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಹಲವು ಕಡೆ ವಾಹನ ಸಂಚಾರ ತೀವ್ರ ಅಸ್ತವ್ಯಸ್ತವಾಗಿದೆ.
ಶಿವಾಜಿನಗರ, ಮೆಜೆಸ್ಟಿಕ್, ಗಾಂಧಿನಗರ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ವಾಹನ ಸವಾರರು ಮನೆ ತಲುಪಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಎಂ.ಜಿ.ರಸ್ತೆ , ಮಲ್ಯ ರಸ್ತೆ, ಶಾಂತಿನಗರ, ಶೇಷಾದ್ರಿಪುರಂ, ಈಜಿಪುರ, ಚಾಮರಾಜಪೇಟೆ, ರಾಜಾಜಿನಗರ, ಕೆ.ಆರ್,ವೃತ್ತ, ಬಸವನಗುಡಿ ಸೇರಿದಂತೆ ನಗರದ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com