

ಬೆಂಗಳೂರು: ಬಿಪಿಒ ಉದ್ಯೋಗಿ ಪ್ರತಿಭಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಕುಮಾರ್ ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ.
ಚಾಲಕ ಶಿವಕುಮಾರ್ ಡಿ.13 2005ರಲ್ಲಿ ಬಿಪಿಒ ಉದ್ಯೋಗಿಯಾಗಿದ್ದ ಪ್ರತಿಭಾ ಅವರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ 2010ರ ಅಕ್ಟೋಬರ್ ನಲ್ಲಿ ಶಿವಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಶಿವಕುಮಾರ್ ಹೈ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದ.
ಇದರಂತೆ ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ನ್ಯಾ.ಎಚ್.ಬಿಲ್ಲಪ್ಪ ಮತ್ತು ನ್ಯಾ.ಕೆ.ಎನ್.ಫಣೀಂದ್ರ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ಪೂರ್ಣಗೊಳಿಸಿ ಮಂಗಳವಾರ ತೀರ್ಪು ಪ್ರಕಟಿಸಿದೆ.