ಬೆಂಗಳೂರಿನ ಪ್ರೇಮಿಗಳು ಹಾಸನದ ಲಾಡ್ಜಿನಲ್ಲಿ ಆತ್ಮಹತ್ಯೆಗೆ ಶರಣು

ಬೆಂಗಳೂರಿನ ಪ್ರೇಮಿಗಳಿಬ್ಬರು ಹಾಸನದ ಖಾಸಗಿ ಲಾಡ್ಜ್ ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಹಾಸನ: ಬೆಂಗಳೂರಿನ ಪ್ರೇಮಿಗಳಿಬ್ಬರು ಹಾಸನದ ಖಾಸಗಿ ಲಾಡ್ಜ್ ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ದೊಮ್ಮಲೂರು ಬಡಾವಣೆಯ ಅರುಣ್ ಕುಮಾರ್(21) ಮತ್ತು ವಿಜಯಲಕ್ಷ್ಮಿ(24) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಈ ಇಬ್ಬರು ಕಾಣೆಯಾಗಿದ್ದು, ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು.
ಐದು ವರ್ಷಗಳ ಹಿಂದೆಯೇ ವಿಜಯಲಕ್ಷ್ಮಿಗೆ ಮದುವೆಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಅರುಣ್ ಅವಿವಾಹಿತ ಎನ್ನಲಾಗಿದೆ.
ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com