
ಬೆಂಗಳೂರು: ಕೇಂದ್ರ ಬರ ಅಧ್ಯಯನ ತಂಡ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬರ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದೆ.
ಅನಾವೃಷ್ಟಿಯಿಂದ ರಾಜ್ಯದಲ್ಲಿ ಸುಮಾರು 15 ಸಾವಿರ ಕೋಟಿ ರೂ. ಬೆಳೆ ನಷ್ಟ ಅಂದಾಜಿಸಲಾಗಿದೆ. ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ.
ಕೇಂದ್ರದ 12 ಜನರ ತಂಡ ಮೂರು ಗುಂಪುಗಳಾಗಿ ವಿಂಗಡವಾಗಿದೆ. ಮೊದಲ ಗುಂಪು ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಮತ್ತು ದಾವಣಗೆರೆಯಲ್ಲಿ ಅಧ್ಯಯನ ನಡೆಸಲಿದೆ.
ಎರಡನೇ ತಂಡ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಿದೆ. ಮೂರನೇ ತಂಡ ತುಮಕೂರು, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. 110 ತಾಲೂಕುಗಳ ಬರ ನಿರ್ವಹಣೆಗೆ ರಾಜ್ಯ ಕೇಂದ್ರದಿಂದ 3,375 ಕೋಟಿ ರೂ ಪರಿಹಾರ ಕ್ಕೆ ಬೇಡಿಕೆ ಇಟ್ಟಿದೆ.
Advertisement