

ಬೆಂಗಳೂರು: ಪೊಲೀಸರ ಕೆಲಸದ ಒತ್ತಡ ತಗ್ಗಿಸಲು ಪ್ರತಿ ವರ್ಷ ಇಂತಿಷ್ಟು ಪ್ರಮಾಣದ ಹೊಸ ಸಿಬ್ಬಂದಿ ನೇಮಕ ಮಾಡಿ, ಆ ಮೂಲಕ ಪೊಲೀಸ್ ಇಲಾಖೆ ಸಾಮರ್ಥ್ಯ ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಪೊಲೀಸ್ ಇಲಾಖೆಯ ಎಲ್ಲಾ ಕೇಡರ್ ಗಳಲ್ಲಿ ಇರುವ ಬಾರಿ ಸಂಖ್ಯೆಯ ಖಾಲಿ ಹುದ್ದೆಗಳಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ ನೇಮಕಾತಿ ಮಾಡಬೇಕು ಎಂದು ಹೈಕೋರ್ಟ್ ತಿಳಿಸಿದೆ.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಲು ವಿಳಂಬ ಮಾಡುತ್ತಿರುವುದನ್ನ ಪ್ರಶ್ನಿಸಿ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ಏಪ್ರಿಲ್ ನಲ್ಲಿ ನಡೆದ ಗಾರ್ಮೆಂಟ್ಸ್ ನೌಕರರ ಪ್ರತಿಭಟನೆಯನ್ನು ತಡೆಗಟ್ಟುವಲ್ಲಿ ಅಗತ್ಯ ಪ್ರಮಾಣದ ಸಿಬ್ಬಂದಿ ಇರದ ಕಾರಣ ದೊಂಬಿ ನಡೆದಿತ್ತು. ಹೀಗಾಗಿ ನ್ಯಾಯಮೂರ್ತಿ ವೇಣುಗೋಪಾಲಗೌಡ ಈ ತೀರ್ಪು ನೀಡಿದ್ದಾರೆ.
ಯಾವ್ಯಾವ ವಿಭಾಗದಲ್ಲಿ ಎಷ್ಟೆಷ್ಟು ಸಿಬ್ಬಂದಿ ಅವಶ್ಯಕತೆ ಇದೆ ಎಂಬುದರ ಪಟ್ಟಿ ತಯಾರಿಸಿ ಅದರಂತೆ ನೇಮಕಾತಿಗೆ ಅರ್ಜಿ ಕರೆದು, ಅದರಲ್ಲಿ ಮೆರಿಟ್ ಪಟ್ಟಿ ತಯಾರಿಸಿ, ದೈಹಿಕ ಹಾಗೂ ಲಿಖಿತ ಪರೀಕ್ಷೆ ನಡೆಸಿ ಪ್ರತಿ ವರ್ಷ ನೇಮಕಾತಿ ನಡೆಸಬೇಕು ಎಂದು ಕೋರ್ಟ್ ಹೇಳಿದೆ.