ಇನ್ನು ನಿಯಮಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಬೇಜವಾಬ್ದಾರಿತನದಿಂದ ಚಿತ್ರೀಕರಣ ನಡೆಸಿದ್ದ ಚಿತ್ರತಂಡದ ವಿರುದ್ಧ ಜಲಾಶಯದ ಅಧೀಕ್ಷಕಿ ಅನಸೂಯ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಮಾಸ್ತಿಗುಡಿ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದ್ದು, ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮಾ, ನಿರ್ಮಾಪಕ ಸುಂದರ್, ಚಿತ್ರತಂಡದ ಯುನಿಟ್ ಮ್ಯಾನೇಜರ್ ಭರತ್ ವಿರುದ್ಧ ಸೆಕ್ಷನ್ 304, 188 ಸಹ ಕಲಂ 34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.