
ಬೆಂಗಳೂರು: ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಧೈರ್ಯವಿದ್ದರೇ, ಕಾಶ್ಮೀರ ಸಮಸ್ಯೆಯನ್ನು ಕುಳಿತು ಮಾತನಾಡಿ ಬಗೆಹರಿಸಲಿ ಎಂದು ಕಾಂಗ್ರೆಸ್ ನಾಯಕ ಹಾಗೂ ಖ್ಯಾತ ಇತಿಹಾಸ ತಜ್ಞ ರಾಮಚಂದ್ರಗುಹಾ ಆಗ್ರಹಿಸಿದ್ದಾರೆ.
ಇಂಡಿಯನ್ ಆರ್ಥಿಕ ವಾಣಿಜ್ಯ ಸಂಸ್ಥೆ ಹಾಗೂ ಲೆಹೆರ್ ಎನ್ ಜಿ ಓ ಹಾಗೂ ಟಾವ್ಜೂನ್ ಫೌಂಡೇಶನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಣಿಶಂಕರ್ ಅಯ್ಯರ್ ಪಾಕಿಸ್ತಾನ-ಭಾರತ ವಿಭಜನೆಯಾದದ್ದು ಒಂದು ಆಕ್ಸಿಡೆಂಟ್ ಎಂದು ಅಭಿಪ್ರಾಯಪಟ್ಟರು.
ಒಂದು ವೇಳೆ ಪಾಕಿಸ್ತಾನ ವಿಭಜನೆಯಾಗದಿದ್ದರೇ 1.5 ಬಿಲಿಯನ್ ಭಾರತೀಯರು ಇರುತ್ತಿದ್ದರು. ಪಾಕಿಸ್ತಾನದಲ್ಲಿರುವವರನ್ನು ಗಮನದಲ್ಲಿಟ್ಟುಕೊಂಡು ಕಾಶ್ಮೀರ ಸಮಸ್ಯೆ ಬಗೆಹರಿಸಲು ಪರಸ್ಪರ ಕೂತು ಮಾತನಾಡಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರಯತ್ನಿಸಿದ್ದರು ಎಂದು ಅವರು ತಿಳಿಸಿದ್ದಾರೆ.
ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲು ಧೈರ್ಯವಿರುವವರಿಗೆ ಕಾಶ್ಮೀರ ವಿಷಯದಲ್ಲಿ ಮಾತನಾಡಲು ಧೈರ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಎಷ್ಟು ಸರ್ಜಿಕಲ್ ಸ್ಟ್ರೈಕ್ಸ್ ನಡೆಸಿದರೇ ಏನು ಪ್ರಯೋಜನ ಎಂದು ಪ್ರಶ್ನಿಸಿರುವ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅದೇ ರೀತಿಯ ಪರಿಸ್ಥಿತಿ ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.
Advertisement