ಕನಕದಾಸ ಜಯಂತಿ, ನಾಳೆ ಬ್ಯಾಂಕ್ ಗಳಿಗೆ ರಜೆ

ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಎಲ್ಲಾ ಬ್ಯಾಂಕ್ ಗಳಿಗೆ ರಜೆ ಇದೆ. ಹೀಗಾಗಿ ಬ್ಯಾಂಕ್ ನೌಕರರ ಜೊತೆ ನೋಟು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಎಲ್ಲಾ ಬ್ಯಾಂಕ್ ಗಳಿಗೆ ರಜೆ ಇದೆ. ಹೀಗಾಗಿ ಬ್ಯಾಂಕ್ ನೌಕರರ ಜೊತೆ ನೋಟು ಬದಲಾವಣೆಗಾಗಿ ಕ್ಯೂನಲ್ಲಿ ನಿಲ್ಲುವ ಗ್ರಾಹಕರು ಸಹ ಒಂದು ದಿನದ ಮಟ್ಟಿಗೆ ವಿಶ್ರಾಂತಿ ಪಡೆಯಬಹುದಾಗಿದೆ. 
ಕಳೆದ ಒಂದು ವಾರದಿಂದ ವಾರಾಂತ್ಯದ ರಜಾ ದಿನ ಸೇರಿದಂತೆ ಸರ್ಕಾರಿ ರಜಾ ದಿನಗಳಲ್ಲೂ ತೀವ್ರ ಒತ್ತಡದ ಮಧ್ಯೆ ಕೆಲಸ ಮಾಡಿದ ಬ್ಯಾಂಕ್ ನೌಕರರಿಗೆ ಒಂದಿಷ್ಟು ನೆಮ್ಮದಿ ಸಿಕ್ಕಂತಾಗಿದೆ. ಈ ರಜಾ ಕರ್ನಾಟಕಕ್ಕೆ ಮಾತ್ರ ಅನ್ವಯಿಸುತ್ತದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಮುಖ್ಯ ವ್ಯವಸ್ಥಾಪಕ ಸುರೇಶ್ ಎಸ್ ಅವರು, ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ನಮ್ಮ ಎಲ್ಲಾ ಬ್ಯಾಂಕ್ ಶಾಖೆಗಳಿಗೆ ರಜೆ ಇದೆ. ಆದರೆ ಎಟಿಎಂಗೆ ಹಣ ತುಂಬುವ ಕಾರ್ಯ ನಡೆಯುತ್ತದೆ ಎಂದು ಹೇಳಿದ್ದಾರೆ.
ನಾಳೆ ಕೇವಲ ಬ್ಯಾಂಕ್ ಗಳಿಗೆ ಮಾತ್ರ ರಜೆ ಇದ್ದು, ಅಂಚೆ ಕಚೇರಿಗಳು ಕೆಲಸ ನಿರ್ವಹಿಸುತ್ತಿರುವುದರಿಂದ ಸಾರ್ವಜನಿಕರು ಇಲ್ಲಿ ನೋಟ್ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com