ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಐಟಿ ಶಾಕ್, ಒಎಂಸಿ, ಎಎಂಸಿ ಕಚೇರಿ ಮೇಲೆ ದಾಳಿ

ಇತ್ತೀಚೆಗಷ್ಟೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೋಟ್ಯಂತರ ರುಪಾಯಿ ಖರ್ಚು ಮಾಡಿ ಅದ್ದೂರಿಯಾಗಿ ಮಗಳ ಮದುವೆ ಮಾಡಿ ಎಲ್ಲರ ಹುಬ್ಬೇರಿಸಿದ್ದ ಮಾಜಿ....
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
Updated on
ಬಳ್ಳಾರಿ: ಇತ್ತೀಚೆಗಷ್ಟೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೋಟ್ಯಂತರ ರುಪಾಯಿ ಖರ್ಚು ಮಾಡಿ ಅದ್ದೂರಿಯಾಗಿ ಮಗಳ ಮದುವೆ ಮಾಡಿ ಎಲ್ಲರ ಹುಬ್ಬೇರಿಸಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಗಣಿ ದಣಿಯ ಎರಡು ಕಚೇರಿಗಳ ಮೇಲೆ ಸೋಮವಾರ ದಿಢೀರ್ ದಾಳಿ ನಡೆಸಿದ್ದಾರೆ.
ಜನಾರ್ದನ ರೆಡ್ಡಿ ಒಡೆತನದ ಒಎಂಸಿ ಹಾಗೂ ಎಎಂಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಸಿರಗುಪ್ಪ ರಸ್ತೆಯಲ್ಲಿರುವ ರೆಡ್ಡಿಯ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ರೆಡ್ಡಿ ನಿವಾಸದ ಬಳಿ ಇರುವ ಒಎಂಸಿ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.
ಜನಾರ್ದನ ರೆಡ್ಡಿ ಅವರು ಇತ್ತೀಚೆಗೆ ತಮ್ಮ ಮಗಳಾದ ಬ್ರಹ್ಮಿಣಿ ಮದುವೆಯನ್ನು ಸುಮಾರು 500 ಕೋಟಿ ರುಪಾಯಿ ವೆಚ್ಚ ಮಾಡಿ ಮಾಡಿದ್ದಾರೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ದೂರು ದಾಖಲಿಸಿದ್ದರು.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುವಾಸ ಅನುಭವಿಸಿದ್ದು, ಅವರ ಎಲ್ಲಾ ಆಸ್ತಿ, ಬ್ಯಾಂಕ್ ಖಾತೆಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡಿತ್ತು. ಹಾಗಿದ್ದ ಮೇಲೆ ಅದ್ದೂರಿ ಮದುವೆ ಮಾಡಲು ಹಣ ಎಲ್ಲಿಂದ ಬಂತು, ಹಣದ ಮೂಲದ ಬಗ್ಗೆ ತನಿಖೆಯಾಗಬೇಕೆಂದು ನರಸಿಂಹಮೂರ್ತಿ ಅವರು ದೂರಿನಲ್ಲಿ ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com