ಮೇಜರ್ ಅಕ್ಷಯ್
ರಾಜ್ಯ
ಹುತಾತ್ಮ ಯೋಧ ಮೇಜರ್ ಅಕ್ಷಯ್ ಅಂತಿಮ ದರ್ಶನ ಪಡೆದ ಸಾರ್ವಜನಿಕರು
ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಪಾರ್ಥಿವ ಶರೀರದ...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು, ಸಾರ್ವಜನಿಕರು.
ಯಲಹಂಕದ ನಿವಾಸಕ್ಕೆ ಅಕ್ಷಯ್ ಪಾರ್ಥಿವ ಶರೀರವನ್ನು ಮಧ್ಯಾಹ್ನ ತರಲಾಗಿದ್ದು ಸಾರ್ವಜನಿಕರ ಅಂತಿನ ದರ್ಶನಕ್ಕೆ ಅನುವು ಮಾಡಿಕೊಂಡಲಾಗಿತ್ತು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಅಂತಿಮ ದರ್ಶನದ ಬಳಿಕ ಮಿಲಿಟರಿಯ ತೆರದ ವಾಹನದಲ್ಲಿ ಹೆಬ್ಬಾಳದಲ್ಲಿರುವ ಚಿತಾಗಾರ ಕೊಂಡೊಯ್ಯದು ಅಂತ್ಯಸಂಸ್ಕಾರ ನೆರವೇರಿಸಲಾಗುವುದು.
ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಕ್ಷಯ್ ಕುಮಾರ್ ಸೇರಿದಂತೆ 7 ಯೋಧರು ಹುತಾತ್ಮರಾಗಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ