ಈ ಹಂತದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯ, ಎರಡು ದಿನ ಕಾದು ನೋಡಿ: ಸದಾನಂದ ಗೌಡ

ಕೋರ್ಟ್ ನಿಂದ ಬಂದಿರುವ ತೀರ್ಪು ಆಘಾತಕಾರಿಯಾಗಿದೆ. ಈ ಹಂತದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯ ಎಂದು ಸದಾನಂದ ಗೌಡ ಹೇಳಿದ್ದಾರೆ.
ಸದಾನಂದ ಗೌಡ
ಸದಾನಂದ ಗೌಡ
Updated on: 

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಸದಾನಂದ ಗೌಡ, ಕೋರ್ಟ್ ನಿಂದ ಬಂದಿರುವ ತೀರ್ಪು ಆಘಾತಕಾರಿಯಾಗಿದೆ. ಈ ಹಂತದಲ್ಲಿ ಕಾವೇರಿ ನಿರ್ವಹಣಾ ಮಂಡಳಿ  ರಚನೆ ಅಸಾಧ್ಯ ಎಂದು ಹೇಳಿದ್ದಾರೆ. ಇದೇ ವೇಳೆ ನಿರ್ವಹಣಾ ಮಂಡಳಿ ವಿಚಾರವಾಗಿ ಮಾರ್ಮಿಕವಾಗಿ ನುಡಿದಿರುವ ಸದಾನಂದ ಗೌಡ, ಎರಡು ದಿನ ಕಾಡು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಆರಂಭದಲ್ಲೇ ಎಡವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದು, ರಾಜ್ಯದ ಜಲಾಶಯಗಳ ವಸ್ತುಸ್ಥಿತಿ ಅರಿಯಲು ತಜ್ಞರ ತಂಡ ಕಳಿಸಲು ರಾಜ್ಯ ಸರ್ಕಾರ ಹಲವು ಬಾರಿ ಮನವಿ ಮಾಡಿತ್ತು, ಆದರೆ ಕೋರ್ಟ್ ತೀರ್ಪಿನಿಂದ ರಾಜ್ಯಕ್ಕೆ ಆಘಾತವಾಗಿದೆ. ಈ ಹಂತದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯ ಎಂಬುದನ್ನು ತಾವು ಕಾನೂನು ಸಚಿವರಾದಾಗ ಕೋರ್ಟ್ ಗೆ ಸ್ಪಷ್ಟಪಡಿಸಿರುವುದಾಗಿ ಸದಾನಂದ ಗೌಡ ಮಾಹಿತಿ ನೀಡಿದ್ದಾರೆ.

ಇನ್ನು ಪ್ರಧಾನಿ ಮಧ್ಯಪ್ರವೇಶದ ಬಗ್ಗೆಯೂ ಮಾತನಾಡಿರುವ ಸದಾನಂದ ಗೌಡ, ಸಾಂವಿಧಾನಿಕ ಆದೇಶದ ವಿರುದ್ಧ ಮಧ್ಯಸ್ಥಿಕೆ ವಹಿಸುವುದು ಅಸಾಧ್ಯ ಎಂದಿದ್ದಾರೆ, ಆದರೆ ಎರಡು ದಿನ ಕಾದು ನೋಡಿ ಎಲ್ಲವೂ ತಿಳಿಯಲಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com